ಎಸ್‌ಬಿಐ ಸರ್ಕಲ್ ಆಫೀಸರ್(CBO) ಬೃಹತ್ ನೇಮಕಾತಿಗೆ ಅರ್ಜಿ ಸಲ್ಲಿಕೆ ಮರು-ಪ್ರಾರಂಭ, ಅಪ್ಲೈ ಮಾಡಿ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

SBI Bank CBO Recruitment 2025
SBI Bank CBO Recruitment 2025

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಖಾಲಿ ಇರುವ 2600 ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI CBO) ನೇಮಕಾತಿ 2025 – ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವೃತ್ತ ಆಧಾರಿತ ಅಧಿಕಾರಿ ಹುದ್ದೆಗಳಿಗೆ ಬೃಹತ್ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು‌ ಬಯಸುವ ಅಭ್ಯರ್ಥಿಗಳು SBI ನ‌ ಅಧಿಕೃತ ವೆಬ್‌ಸೈಟ್‌ sbi.co.inಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

Highlights of Employment News

Organization Name – State Bank of India
Post Name – Circle Based Officer (CBO)
Total Vacancy – 2600 ( + 364 Backlog)
Application Mode – Online
Job Location – All India (Karnataka)

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – 21-06-2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – 30-06-2025

ಶೈಕ್ಷಣಿಕ ಅರ್ಹತೆ:

ಎಸ್ ಬಿ ಐ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಯಾವುದೇ ಪದವಿ(Any Degree) ಪಡೆದಿರಬೇಕು.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ – 21 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ:

  • ಆನ್ ಲೈನ್ ಪರೀಕ್ಷೆ
  • ಸಂದರ್ಶನ
  • ಸ್ಥಳೀಯ ಭಾಷಾ ಪ್ರಾವೀಣ್ಯತೆಯ ಪರೀಕ್ಷೆ
  • ದಾಖಲೆಗಳ ಪರಿಶೀಲನೆ

ಅರ್ಜಿ ಶುಲ್ಕ:

  • ಸಾಮಾನ್ಯ/ ಇಡಬ್ಲ್ಯೂಎಸ್/ ಒಬಿಸಿ ಅಭ್ಯರ್ಥಿಗಳಿಗೆ: 750/-
  • SC/ST/PwBD ಅಭ್ಯರ್ಥಿಗಳಿಗೆ: ಯಾವುದೇ ಶುಲ್ಕವಿಲ್ಲ

How to Apply for SBI CBO Recruitment 2025

ಅರ್ಜಿ‌ ಸಲ್ಲಿಸುವ ವಿಧಾನ;

  • ಮೊದಲಿಗೆ SBI ನ ಅಧಿಕೃತ ವೆಬ್‌ಸೈಟ್‌ https://sbi.co.in/web/careers/current-openings ಗೆ ಭೇಟಿ ನೀಡಿ.
  • Current Opaenings ವಿಭಾಗದಲ್ಲಿ ನೀಡಿಲಾಗಿರುವ ಪ್ರಕಟಣೆಗಳಲ್ಲಿ ವೃತ್ತಾಧಾರಿತ ಅಧಿಕಾರಿಗಳ ನೇಮಕಾತಿ (09.05.2025 ರಿಂದ 29.05.2025 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ) ಈಗಲೇ ಅನ್ವಯಿಸಿ(APPLY NOW) ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕ ‌ಪಾವತಿ‌ ಮಾಡಿ.
  • ಕೊನೆದಾಗಿ ಅರ್ಜಿಯನ್ನು ಪರೀಶೀಲನೆ‌ ಮಾಡಿ‌ ಅರ್ಜಿಯನ್ನು ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಷಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Online Application Form Reopen Notice (Dated on 21/6/2025)Download
Official Notification PDFDownload
Online Application Form LinkApply Now
Official Websitesbi.co.in
More UpdatesKarnataka Help.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment