ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ನಲ್ಲಿ ಜೂನಿಯರ್ ಅಸೋಸಿಯೇಟ್ಸ್ (ಕ್ಲರ್ಕ್) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಕೇಂದ್ರ ನೇಮಕಾತಿ ಮತ್ತು ಬಡ್ತಿ ಇಲಾಖೆ ಕಾರ್ಪೊರೇಟ್ ಕೇಂದ್ರ ಮುಂಬೈ ಬುಧವಾರ(ಜು.6)ದಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಕ್ಲೆರಿಕಲ್ ಕೇಡರ್‌ನಲ್ಲಿ ಖಾಲಿ ಇರುವ (5180 ನಿಯಮಿತ ಹಾಗೂ 1409 ಬ್ಯಾಕ್ ಲಾಗ್) ಒಟ್ಟು 6589 ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ವೆಬ್‌ಸೈಟ್ https://sbi.co.in/web/careers/current-openingsಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Applying post