SBI Clerk 2025: ಜೂ.ಅಸೋಸಿಯೇಟ್ ಹುದ್ದೆಗಳ ಬೃಹತ್ ನೇಮಕಾತಿ, ಈಗಲೇ ಅಪ್ಲೈ ಮಾಡಿ

Published on:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ನಲ್ಲಿ ಜೂನಿಯರ್ ಅಸೋಸಿಯೇಟ್ಸ್ (ಕ್ಲರ್ಕ್) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಕೇಂದ್ರ ನೇಮಕಾತಿ ಮತ್ತು ಬಡ್ತಿ ಇಲಾಖೆ ಕಾರ್ಪೊರೇಟ್ ಕೇಂದ್ರ ಮುಂಬೈ ಬುಧವಾರ(ಜು.6)ದಂದು ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ.

ಕ್ಲೆರಿಕಲ್ ಕೇಡರ್‌ನಲ್ಲಿ ಖಾಲಿ ಇರುವ (5180 ನಿಯಮಿತ ಹಾಗೂ 1409 ಬ್ಯಾಕ್ ಲಾಗ್) ಒಟ್ಟು 6589 ಜೂನಿಯರ್ ಅಸೋಸಿಯೇಟ್ (ಕಸ್ಟಮರ್ ಸಪೋರ್ಟ್ & ಸೇಲ್ಸ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಪದವಿ ಪೂರ್ಣಗೊಳಿಸಿರುವ ಅರ್ಹ ಅಭ್ಯರ್ಥಿಗಳು SBI ನ‌ ಅಧಿಕೃತ ವೆಬ್‌ಸೈಟ್‌ https://sbi.co.in/web/careers/current-openingsಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಆಗಸ್ಟ್ 6, 2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಆಗಸ್ಟ್ 26, 2025
  • ಪೂರ್ವಭಾವಿ ಪರೀಕ್ಷೆ(ತಾತ್ಕಾಲಿಕ) – ಸೆಪ್ಟೆಂಬರ್​ 2025
  • ಮುಖ್ಯ ಪರೀಕ್ಷೆ(ತಾತ್ಕಾಲಿಕ) – ನವೆಂಬರ್​ 2025

ಶೈಕ್ಷಣಿಕ ಅರ್ಹತೆ:

SBI ಅಧಿಸೂಚನೆಯಂತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟ ಯಾವುದೇ ಸಮಾನ ಅರ್ಹತೆ ಹೊಂದಿರಬೇಕು.

ವಯೋಮಿತಿ:

01-04-2025 ರಂತೆ;

  • ಕನಿಷ್ಠ ಮಿತಿ – 20 ವರ್ಷಗಳು
  • ಗರಿಷ್ಠ ಮಿತಿ – 28 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ:

  • ಪೂರ್ವಭಾವಿ ಪರೀಕ್ಷೆ
  • ಮುಖ್ಯ ಪರೀಕ್ಷೆ
  • ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ
  • ದಾಖಲೆ ಪರಿಶೀಲನೆ ಮತ್ತು ಅಂತಿಮ ಆಯ್ಕೆ

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ – 24,050 – 64,480ರೂ. ವರೆಗೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 750 ರೂ.
  • ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಹಾಗೂ ಅಂಗವಿಕಲ ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ.

How to Apply For SBI Bank Clerk Recruitment 2025

ಅರ್ಜಿ‌ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ;

  • ಮೊದಲಿಗೆ SBI ನ ಅಧಿಕೃತ ವೆಬ್‌ಸೈಟ್‌ https://sbi.co.in/web/careers/current-openings ಗೆ ಭೇಟಿ ನೀಡಿ.
  • current openings ವಿಭಾಗದಲ್ಲಿ *ಜಾಹೀರಾತು ಸಂಖ್ಯೆ: CRPD/CR/2025-26/06* ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ *ಈಗಲೇ ಅನ್ವಯಿಸು* ಲಿಂಕ್ ಮೇಲೆ ಟ್ಯಾಪ್ ಮಾಡಿ.
  • ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ‌ಪಾವತಿ‌ ಮಾಡಿ.
  • ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitesbi.co.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

3 thoughts on “SBI Clerk 2025: ಜೂ.ಅಸೋಸಿಯೇಟ್ ಹುದ್ದೆಗಳ ಬೃಹತ್ ನೇಮಕಾತಿ, ಈಗಲೇ ಅಪ್ಲೈ ಮಾಡಿ”

Leave a Comment