ಭಾರತೀಯ ಸ್ಟೇಟ್ ಬ್ಯಾಂಕ್ (SBI) 2024ನೇ ಸಾಲಿನ ಜೂನಿಯರ್ ಕ್ಲರ್ಕ್ ಹುದ್ದೆಗಳಗ ಭರ್ತಿಗಾಗಿ ನಡಸಿದ್ದ ಪರೀಕ್ಷೆಯ ಫಲಿತಾಂಶವನ್ನು 27 ಜೂನ್ 2024 ಅಧಿಕೃತವಾಗಿ ಬಿಡುಗಡೆ ಮಾಡಿತ್ತು ಇದೀಗ (July 04) ಇಲಾಖೆಯು SBI ಕ್ಲರ್ಕ್ ಮುಖ್ಯ ಪರೀಕ್ಷೆಯ ಮಾರ್ಕ್ಸ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ವರ್ಷ ಒಟ್ಟು 8424 ಹುದ್ದೆಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು, ಈ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮಾರ್ಕ್ಸ್ ಪಟ್ಟಿಯನ್ನು ಬ್ಯಾಂಕ್ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು SBIನ ಅಧಿಕೃತ ವೆಬ್ ಸೈಟಿನಲ್ಲಿ ತಮ್ಮ ಫಲಿತಾಂಶಗಳನ್ನು ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಫಲಿತಾಂಶದ ವಿವರಗಳನ್ನು ಮತ್ತು ಮಾರ್ಕ್ಸ್ ಪಟ್ಟಿ ಪಡೆಯಬಹುದು.SBI ಕ್ಲರ್ಕ್ ಮುಖ್ಯ ಪರೀಕ್ಷೆಯ ಫಲಿತಾಂಶ ಅನ್ನು ಅಧಿಕೃತ ವೆಬ್ ಸೈಟ್ www.sbi.co.in ನಲ್ಲಿ ಪ್ರಕಟಿಸಲಾಗಿದೆ. ಈ ಲೇಖನದಲ್ಲಿ ನಾವು ಆನ್ಲೈನ್ ಮೂಲಕ ಫಲಿತಾಂಶವನ್ನು ಹೇಗೆ ವೀಕ್ಷಿಸಬೇಕು ಎಂಬುದನ್ನು ತಿಳಿದುಕೊಳ್ಳೋಣ.