ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಅಧಿಸೂಚನೆಯ ಮೂಲಕ 63 ಕೇಡರ್ ಆಫೀಸರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಒಳ್ಳೆಯ ಅವಕಾಶ ಅಭ್ಯವಾಗಿದೆ.
ಈ ಬ್ಯಾಂಕಿನಲ್ಲಿ ಮೆನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತರಿಗೆ ಎಸ್.ಬಿ.ಐ. ಗಡುವನ್ನು ಸಹ ವಿಸ್ತರಿಸಿದ್ದು, ಅಕ್ಟೋಬರ್ 15 ರ ವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಹತೆ, ವಯಸ್ಸಿನ ಮಿತಿ, ಆಯ್ಕೆ ಪ್ರಕ್ರಿಯೆ, ವೇತನ ಸೇರಿದಂತೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಲಿಂಕ್ ಗಳನ್ನು ಸಹ ಒದಗಿಸಲಾಗಿದ್ದು, ಸಂಪೂರ್ಣ ಮಾಹಿತಿಯನ್ನು ಕೆಳಗೆ ಓದಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 11, 2025
ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಅಕ್ಟೋಬರ್ 15, 2025
ಖಾಲಿ ಇರುವ ಹುದ್ದೆಗಳ ವಿವರ:
ಮೆನೇಜರ್ (ಕ್ರೆಡಿಟ್ ವಿಶ್ಲೇಷಕ) – 63
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಯು ಹಣಕಾಸು ವಿಷಯದಲ್ಲಿ CA/CFA/ICWA/ಪದವಿ/MBA/PGDBA/PGDBM ಪದವಿಯನ್ನು ಹೊಂದಿರಬೇಕು ಎಂದು ಹೇಳಲಾಗಿದೆ. ಇದಲ್ಲದೇ ಈ ಕ್ಷೇತ್ರದಲ್ಲಿ 3 ವರ್ಷಗಳ ಉದ್ಯೋಗಾನುಭವವನ್ನೂ ಕೇಳಿರುತ್ತಾರೆ.
ವಯೋಮಿತಿ:
ಮೆನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷಗಳು ಪೂರ್ಣಗೊಂಡಿರಬೇಕು ಅಲ್ಲದೇ ಗರಿಷ್ಟ 35 ವರ್ಷಗಳಾಗಿರಬೇಕು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು – 03 ವರ್ಷಗಳು
ಪ.ಜಾತಿ/ಪ.ಪಂಗಡ ಅಭ್ಯರ್ಥಿಗಳು – 05 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು – 10 ವರ್ಷಗಳು
ವಿಕಲಚೇತನ (ಒಬಿಸಿ) ಅಭ್ಯರ್ಥಿಗಳು – 10 ವರ್ಷಗಳು
ವಿಕಲಚೇತನ (ಪ.ಜಾತಿ/ಪ.ಪಂಗಡ) ಅಭ್ಯರ್ಥಿಗಳು – 10 ವರ್ಷಗಳು
ಆಯ್ಕೆ ಪ್ರಕ್ರಿಯೆ:
ಕಿರುಪಟ್ಟಿ
ಸಂದರ್ಶನ
ಅರ್ಜಿ ಶುಲ್ಕ:
ಪ.ಜಾತಿ/ಪ.ಪಂಗಡ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ. ಸಾಮಾನ್ಯ/ಒಬಿಸಿ/ಆರ್ಥಿಕ ದುರ್ಬಲ ಅಭ್ಯರ್ಥಿಗಳು: ರೂ.750/- ನ್ನು ಆನ್ ಲೈನ್ ಮೂಲಕ ಪಾವತಿ ಮಾಡುವಂತೆ ತಿಳಿಸಲಾಗಿರುತ್ತದೆ.
ಅರ್ಜಿ ಸಲ್ಲಿಕೆಯ ಹಂತಗಳು
ಹಂತ 1→ ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಹಂತ 2→ ಮ್ಯಾನೇಜರ್ ಹುದ್ದೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ 3→ Apply Now ಬಟ್ಟನ್ ಒತ್ತಿ, ನೋಂದಣಿ (Registration) ಮಾಡಿಕೊಳ್ಳಿ. ತದನಂತರ ತಮ್ಮ ನೋಂದಣಿ ಸಂಖ್ಯೆ ಮತ್ತ ಪಾಸ್ವರ್ಡ್ ಬಳಸಿ ಲಾಗಿನ್ ಮಾಡಿಕೊಳ್ಳಿ
Sbi Manager Post Apllication
ಹಂತ 4→ ಮುಂದೆ ಆನ್ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ವಯಕ್ತಿಕ, ಶೈಕ್ಷಣಿಕ, ಅವಶ್ಯಕ ಮಾಹಿತಿಗಳನ್ನು ಪೂರೈಸಿರಿ. ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್ಲೋಡ್ ಮಾಡಿ.
ಹಂತ 5→ ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿರಿ. (ಅನ್ವಯಿಸಿದರೆ ಮಾತ್ರ)
ಹಂತ 6→ ನೀವು ನೀಡಿದ ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಪರೀಕ್ಷಿಸಿ, ಅರ್ಜಿ ಸಲ್ಲಿಸಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯಿರಿ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.