SBI PO Admit Card 2025:ಎಸ್‌ಬಿಐ ಬ್ಯಾಂಕ್ ನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಮೊದಲ ಹಂತದ ಪೂರ್ವಭಾವಿ ಪರೀಕ್ಷೆಯನ್ನು ಮಾರ್ಚ್ 8, 15ರಂದು ನಡೆಸುತ್ತಿದೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು ಇಂದು (ಫೆ.28) ಬಿಡುಗಡೆ ಮಾಡಿದೆ.
ಕಳೆದ ವರ್ಷ ಡಿಸೆಂಬರ್ 27 ರಿಂದ ಜನವರಿ 19 ವರೆಗೆ ಅರ್ಜಿ ಸಲ್ಲಿಕೆ ಅವಕಾಶ ಕಲ್ಪಿಸಲಾಗಿತ್ತು. ಒಟ್ಟು 600 ಪಿಒ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಲು ಅಧಿಕೃತ ಜಾಲತಾಣವಾದ sbi.co.inಗೆ ಭೇಟಿ ನೀಡಬಹುದು.