SBI PO Mains Admit Card 2025: ಎಸ್.ಬಿ.ಐ – 600 ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ CRPD/PO/2024-25/22 ಅಡಿಯಲ್ಲಿ ಪ್ರಿಲಿಮ್ಸ್ ಸುತ್ತಿನಲ್ಲಿ ಯಶಸ್ವಿಯಾಗಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮೇ ತಿಂಗಳಲ್ಲಿ (ಮೇ 05) ನಡೆಯಲಿರುವ SBI PO ಮುಖ್ಯ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ಮಾಡಿದೆ.
ಎಸ್.ಬಿ.ಐ ಒಟ್ಟು 600 ಹುದ್ದೆಗಳನ್ನು ಭರ್ತಿ ಮಾಡಲು ಮಾರ್ಚ್ 8, 16 ಮತ್ತು 24, 2025 ರಂದು SBI PO – ಪ್ರಿಲಿಮ್ಸ್ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿ ಏಪ್ರಿಲ್ 5 ರಂದು ಫಲಿತಾಂಶವನ್ನು ಪ್ರಕಟಿಸಿತ್ತು. ಪ್ರಿಲಿಮ್ಸ್‌ನಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಈಗ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ ಸೈಟ್ https://sbi.co.in/ ನಲ್ಲಿ ಮುಖ್ಯ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.