ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಬ್ಯಾಂಕಿನಲ್ಲಿ ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನಿಯಮಿತ 1446 ಸ್ಥಾನಗಳು ಹಾಗೂ ಬ್ಯಾಕ್‌ಲಾಗ್ 54 ಸ್ಥಾನಗಳೂ ಸೇರಿದಂತೆ 1500 ಸ್ಥಾನಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಪ್ರಮುಖವಾಗಿ ಮೂರು ಹಂತದ ಆಯ್ಕೆ ಪ್ರಕ್ರಿಯೆಯ ಮೂಲಕ ನೇಮಕ ನಡೆಯಲಿದೆ. ಅರ್ಜಿ ಸಲ್ಲಿಕೆಗೆ ಜು.08ರವರೆಗೆ ಗಡುವು ನೀಡಲಾಗಿದೆ. ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಅರ್ಜಿ ಸಲ್ಲಿಸಲು ಎಸ್‌ಬಿಐ ಅಧಿಕೃತ ವೆಬ್‌ಸೈಟ್ https://sbi.bank.in/web/careers/current-openingsಗೆ ಅಥವಾ https://ibpsreg.ibps.in/sbipojun26/ಗೆ ಭೇಟಿ ನೀಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜೂನ್ 18, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜುಲೈ 08, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜುಲೈ 08, 2026
- ಪೂರ್ವಭಾವಿ ಪರೀಕ್ಷೆಯ ದಿನಾಂಕ – ಆಗಸ್ಟ್, 2026
- ಮುಖ್ಯ ಪರೀಕ್ಷೆಯ ದಿನಾಂಕ – ಸೆಪ್ಟೆಂಬರ್, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು. ವೈದ್ಯಕೀಯ, ಎಂಜಿನಿಯರಿಂಗ್, ಚಾರ್ಟರ್ಡ್ ಅಕೌಂಟೆಂಟ್. ಕಾಸ್ಟ್ ಅಕೌಂಟೆಂಟ್ ಮುಂತಾದ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ:
01-04-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ -21 ವರ್ಷಗಳು, ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು , ಪಿಡಬ್ಲ್ಯೂಬಿಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಬಿಡಿ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳು.
ವೇತನ:
ಆರಂಭಿಕವಾಗಿ, ಪ್ರತಿ ತಿಂಗಳು ರೂ.48,480 ಮೂಲ ವೇತನ ಜೊತೆಗೆ ಇತ್ಯಾದಿ ಸೌಲಭ್ಯ ಮತ್ತು ಭತ್ಯೆಗಳನ್ನು ನೀಡಲಾಗುತ್ತದೆ. (ವೇತನ ಶ್ರೇಣಿ; ರೂ.48480-2000/7-62480-2340/2-67160-2680/7-85920/-)
ಆಯ್ಕೆ ವಿಧಾನ:
- ಹಂತ-I; ಪೂರ್ವಭಾವಿ ಪರೀಕ್ಷೆ
- ಹಂತ-II; ಮುಖ್ಯ ಪರೀಕ್ಷೆ
- ಹಂತ-III; ಮನೋವಿಶ್ಲೇಷಣಾ ಪರೀಕ್ಷೆ, ಗುಂಪು ವ್ಯಾಯಾಮ ಮತ್ತು ವೈಯಕ್ತಿಕ ಸಂದರ್ಶನ
- ಅಂತಿಮ ಆಯ್ಕೆ
ಅರ್ಜಿ ಶುಲ್ಕ:
ಸಾಮಾನ್ಯ/ಇಡಬ್ಲ್ಯೂಎಸ್/ಒಬಿಸಿ ಅಭ್ಯರ್ಥಿಗಳಿಗೆ ರೂ.750
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವ ವಿಧಾನ ಹೇಗೆ?
• ಮೊದಲಿಗೆ ಅಭ್ಯರ್ಥಿಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನಲ್ಲಿ ಲಭ್ಯವಿರುವ (https://sbi.bank.in/web/careers/current-openings) IBPS ಅಧಿಕೃತ ವೆಬ್‌ಸೈಟ್ ಲಿಂಕ್ https://ibpsreg.ibps.in/sbipojun26/ಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಮುಂದುವರೆದಂತೆ ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ನಮೂದಿಸಿ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.
Important Direct Links:
| Official Notification PDF | Download |
| Online Application Form Link | Apply Now |
| Official Website | sbi.bank.in |
| More Updates | KarnatakaHelp.in |
Bhiradi tq raibag
DEVINDRA