ಸ್ಟೇಟ್‌ ಬ್ಯಾಂಕಿ(SBI)ನಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ

Published on:

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ವಿವಿಧ ರಾಜ್ಯಗಳಲ್ಲಿರುವ ತನ್ನ ಶಾಖೆಗಳಲ್ಲಿ ಖಾಲಿ ಇರುವ 105 ನಿವೃತ್ತ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

ಅರ್ಜಿ ಸಲ್ಲಿಸಲು ಮೇ 05 ರವರೆಗೆ ಅವಕಾಶವಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಿ, ಆಸಕ್ತರು ಎಸ್‌ಬಿಐ ಅಧಿಕೃತ ಜಾಲತಾಣದ ಲಿಂಕ್‌ https://recruitment.sbi.bank.in/crpd-rs-2026-27-06/applyಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು..

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 15, 2026
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ – ಮೇ 05, 2026

ಖಾಲಿ ಇರುವ ಹುದ್ದೆಗಳ ವಿವರ:

ಗಾಂಧಿನಗರ 06
ಅಮರಾವತಿ 03
ಬೆಂಗಳೂರು 05
ಭೋಪಾಲ್ 09
ಭುವನೇಶ್ವರ್ 02
ಚಂಡೀಗಢ 02
ಚೆನ್ನೈ 02
ನವದೆಹಲಿ 15
ಹೈದರಾಬಾದ್ 05
ಜೈಪುರ 06
ಕೊಲ್ಕತ್ತಾ 07
ಲಕ್ನೋ 13
ಮಹಾರಾಷ್ಟ್ರ 04
ಮುಂಬೈ ಮೆಟ್ರೋ 05
ಗುವಾಹಟಿ 06
ಪಾಟ್ನಾ 10
ತಿರುವನಂತಪುರಂ 02

ಒಟ್ಟು – 105

ಶೈಕ್ಷಣಿಕ ಅರ್ಹತೆ:

MMGS-II, MMGS-III ಮತ್ತು SMGS-IV ಆಗಿ ನಿವೃತ್ತರಾದ, ಕಳಂಕವಿಲ್ಲದ ಸೇವಾ ದಾಖಲೆ ಹೊಂದಿರುವ SBI ನಿವೃತ್ತ ಅಧಿಕಾರಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅಧಿಕಾರಿಯು ಕಾರ್ಯಕ್ಷಮತೆಯ ಉತ್ತಮ ದಾಖಲೆಯನ್ನು ಹೊಂದಿರಬೇಕು ಮತ್ತು ಅಗತ್ಯಕ್ಕೆ ಅನುಗುಣವಾಗಿ ಸಂಬಂಧಿತ ಕ್ಷೇತ್ರದಲ್ಲಿ ಸಾಕಷ್ಟು ಕೆಲಸದ ಅನುಭವ ಮತ್ತು ಒಟ್ಟಾರೆ ವೃತ್ತಿಪರ ಸಾಮರ್ಥ್ಯವನ್ನು ಹೊಂದಿರಬೇಕು.

ವಯೋಮಿತಿ:

31-03-2026 ರಂತೆ;

ಗರಿಷ್ಠ ವಯಸ್ಸಿನ ಮಿತಿ – 63 ವರ್ಷಗಳು

ಆಯ್ಕೆ ಪ್ರಕ್ರಿಯೆ:

  • ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್ ಲಿಸ್ಟಿಂಗ್
  • ಸಂದರ್ಶನ
  • ಮೆರಿಟ್ ಲಿಸ್ಟ್

ವೇತನ:

ಆಯ್ಕೆಯಾದ ಅಭ್ಯರ್ಥಿಗಳಿಗೆ 45,000ರೂ.-50,000ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ

ಅರ್ಜಿ‌ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ:

• ಅಭ್ಯರ್ಥಿಗಳು SBI ಅಧಿಕೃತ ಜಾಲತಾಣ https://recruitment.sbi.bank.in/crpd-rs-2026-27-06/apply ಕ್ಕೆ ಭೇಟಿ ನೀಡಿ.

• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಈಗಾಗಲೇ ನೋಂದಾಯಿಸಿದ್ದಲ್ಲಿ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.

• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitesbi.bank.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “ಸ್ಟೇಟ್‌ ಬ್ಯಾಂಕಿ(SBI)ನಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಹುದ್ದೆಗಳ ನೇಮಕಾತಿ”

Leave a Comment