ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)ದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಬಿಡುಗಡೆಯಾಗಿದೆ.
ವಿವಿಧ ವೃಂದಗಳಲ್ಲಿ ಮುಖ್ಯಸ್ಥರು(01), ವಲಯ ಮುಖ್ಯಸ್ಥರು(04), ಪ್ರಾದೇಶಿಕ ಮುಖ್ಯಸ್ಥ(07), ರಿಲೇಷನ್ಶಿಪ್ ಮ್ಯಾನೇಜರ್(19), ಇನ್ವೆಸ್ಟ್ಮೆಂಟ್ ಸ್ಪೆಷಲಿಸ್ಟ್(22), ಇನ್ವೆಸ್ಟ್ಮೆಂಟ್ ಆಫೀಸರ್(46), ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್(02) ಹಾಗೂ ಸೆಂಟ್ರಲ್ ರಿಸರ್ಚ್ ಟೀಮ್(02) ಸೇರಿದಂತೆ ಒಟ್ಟು 103 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SBI ನ ಅಧಿಕೃತ ಜಾಲತಾಣ https://sbi.bank.in/web/careersನ ಮೂಲಕ ನ.17ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಆನ್ಲೈನ್ ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ನವೆಂಬರ್ 17 , 2025
ಶೈಕ್ಷಣಿಕ ಅರ್ಹತೆ:
✓ ಮುಖ್ಯಸ್ಥರು ಹುದ್ದೆಗೆ – ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ/ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
✓ ವಲಯ ಮುಖ್ಯಸ್ಥರು, ಪ್ರಾದೇಶಿಕ ಮುಖ್ಯಸ್ಥ ಹಾಗೂ ರಿಲೇಷನ್ಶಿಪ್ ಮ್ಯಾನೇಜರ್ ಹುದ್ದೆಗಳಿಗೆ – ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪೂರ್ಣಗೊಳಿಸಿರಬೇಕು.
✓ ಇನ್ವೆಸ್ಟ್ಮೆಂಟ್ ಸ್ಪೆಷಲಿಸ್ಟ್ ಹಾಗೂ ಇನ್ವೆಸ್ಟ್ಮೆಂಟ್ ಆಫೀಸರ್ ಹುದ್ದೆಗಳಿಗೆ – ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹಣಕಾಸು/ಅಕೌಂಟೆನ್ಸಿ/ವ್ಯವಹಾರ ನಿರ್ವಹಣೆ/ವಾಣಿಜ್ಯ/ಅರ್ಥಶಾಸ್ತ್ರ/ಬಂಡವಾಳ ಮಾರುಕಟ್ಟೆಗಳು/ಬ್ಯಾಂಕಿಂಗ್/ವಿಮೆ/ಆಕ್ಚುರಿಯಲ್ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಸ್ನಾತಕೋತ್ತರ ಡಿಪ್ಲೊಮಾ ಅಥವಾ ಸಿಎ/ಸಿಎಫ್ಎಯಲ್ಲಿ ವೃತ್ತಿಪರ ಅರ್ಹತೆಯನ್ನು ಹೊಂದಿರಬೇಕು.
✓ ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗಳಿಗೆ – ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ MBA/PGDM ಪದವಿ ಪೂರ್ಣಗೊಳಿಸಿರಬೇಕು.
✓ ಸೆಂಟ್ರಲ್ ರಿಸರ್ಚ್ ಟೀಮ್ ಹುದ್ದೆಗಳಿಗೆ – ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ವಾಣಿಜ್ಯ/ಹಣಕಾಸು/ಅರ್ಥಶಾಸ್ತ್ರ/ಮ್ಯಾನೇಜ್ಮೆಂಟ್/ಗಣಿತ/ಸಂಖ್ಯಾಶಾಸ್ತ್ರದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
01/05/2025 ರಂತೆ
✓ ಮುಖ್ಯಸ್ಥರು, ವಲಯ ಮುಖ್ಯಸ್ಥರು ಹಾಗೂ ಪ್ರಾದೇಶಿಕ ಮುಖ್ಯಸ್ಥರು ಹುದ್ದೆಗಳಿಗೆ;
ಕನಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 50 ವರ್ಷಗಳು
✓ ರಿಲೇಷನ್ಶಿಪ್ ಮ್ಯಾನೇಜರ್ ಹಾಗೂ ಇನ್ವೆಸ್ಟ್ಮೆಂಟ್ ಸ್ಪೆಷಲಿಸ್ಟ್ ಹುದ್ದೆಗಳಿಗೆ;
ಕನಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 42 ವರ್ಷಗಳು
✓ ಇನ್ವೆಸ್ಟ್ಮೆಂಟ್ ಆಫೀಸರ್ ಹುದ್ದೆಗಳಿಗೆ;
ಕನಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
✓ ಪ್ರಾಜೆಕ್ಟ್ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗಳಿಗೆ;
ಕನಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 40 ವರ್ಷಗಳು
✓ ಸೆಂಟ್ರಲ್ ರಿಸರ್ಚ್ ಟೀಮ್ ಹುದ್ದೆಗಳಿಗೆ;
ಕನಿಷ್ಠ ವಯಸ್ಸಿನ ಮಿತಿ – 25 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಶಾರ್ಟ್ ಲಿಸ್ಟಿಂಗ್ ಸಂದರ್ಶನ ದಾಖಲೆ ಪರಿಶೀಲನೆ
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 20.60 – 135.00 ವರೆಗೆ ವಾರ್ಷಿಕ CTC ಅನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 750 ರೂ.
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ, ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ
ಮೊದಲಿಗೆ SBI ನ ಅಧಿಕೃತ ಜಾಲತಾಣ https://recruitment.sbi.bank.in/crpd-sco-2025-26-15/apply ಕ್ಕೆ ಭೇಟಿ ನೀಡಿ.
ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
ನಂತರ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಯನ್ನು ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.