ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ಬ್ಯಾಂಕ್ ಒಟ್ಟು 100 ಟ್ರೇಡ್ ಫೈನಾನ್ಸ್ ಆಫೀಸರ್(TFO) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕನಿಷ್ಠ 23 ವರ್ಷ ಮೇಲ್ಪಟ್ಟ ಪದವೀಧರ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಆಧಾರಿತ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಜೂ.02ರೊಳಗೆ ಎಸ್‌ಬಿಐ ಅಧಿಕೃತ ಜಾಲತಾಣ https://recruitment.sbi.bank.in/crpd-sco-2026-27-05/apply ಕ್ಕೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮೇ 13, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 02, 2026
- ಆನ್ಲೈನ್ ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜೂನ್ 02, 2026
ಮೀಸಲಾತಿ ಅನ್ವಯ ಖಾಲಿ ಇರುವ ಹುದ್ದೆಗಳ ವಿವರ:
ಪರಿಶಿಷ್ಟ ಜಾತಿ 14
ಪರಿಶಿಷ್ಟ ಪಂಗಡ 18
ಒಬಿಸಿ 22
ಇಡಬ್ಲ್ಯೂಎಸ್ 08
ಸಾಮಾನ್ಯ 38
ಶೈಕ್ಷಣಿಕ ಅರ್ಹತೆ:
SBI ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು ಹಾಗೂ ಕನಿಷ್ಠ ಎರಡು ವರ್ಷಗಳ ವೃತ್ತಿ ಅನುಭವದೊಂದಿಗೆ IIBF ನಿಂದ ಫಾರೆಕ್ಸ್ ಕಾರ್ಯಾಚರಣೆಗಳಲ್ಲಿ ಪ್ರಮಾಣೀಕರಣವನ್ನು ಹೊಂದಿರಬೇಕು.
ವಯೋಮಿತಿ:
30-04-2026 ರಂತೆ;
ಕನಿಷ್ಠ ವಯಸ್ಸಿನ ಮಿತಿ 23 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ 32 ವರ್ಷಗಳು
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪ.ಜಾತಿ ಹಾಗೂ ಪ. ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಡಿ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ ₹64,820 ರಿಂದ ₹93,960ವರೆಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
- ಅರ್ಹ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್
- ಸಂದರ್ಶನ
ಅರ್ಜಿ ಶುಲ್ಕ:
ಸಾಮಾನ್ಯ, ಇಡಬ್ಲ್ಯೂಎಸ್ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹750
ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ
• ಎಸ್‌ಬಿಐ ಅಧಿಕೃತ ಜಾಲತಾಣ https://recruitment.sbi.bank.in/crpd-sco-2026-27-05/apply ಕ್ಕೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | sbi.bank.in |
| More Updates | KarnatakaHelp.in |