SC Free Drone Training Online Application Form 2025
ಸಮಾಜ ಕಲ್ಯಾಣ ಇಲಾಖೆಯ ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ವತಿಯಿಂದ 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಡ್ರೋನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಲಾಜಿಸ್ಟಿಕ್ಸ್, ಕಣ್ಗಾವಲು, ಕೃಷಿ ಮತ್ತು ವಿವಿಧ ಕ್ಷೇತ್ರಗಳಲ್ಲಿ ಡ್ರೋನ್ ಉಪಕರಣವನ್ನು ಉಪಯೋಗಿಸುವ ಕುರಿತು 15 ದಿನಗಳವರೆಗೆ ವಸತಿಯುತ ಡ್ರೋನ್ ತರಬೇತಿ ನೀಡಲಿದೆ, ಡ್ರೋನ್ ಕಲಿಕೆಯಲ್ಲಿ ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಸೆ.20ರೊಳಗೆ https://swdservices.karnataka.gov.in/petccoaching/DroneHome.aspxಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್ಸೆಸ್ಸೆಲ್ಸಿ(10ನೇ ತರಗತಿ)ಉತ್ತೀರ್ಣರಾಗಿರಬೇಕು.
ವಯೋಮಿತಿ:
ಕನಿಷ್ಠ ಮಿತಿ – 18 ವರ್ಷಗಳು
ಗರಿಷ್ಠ ಮಿತಿ – 45 ವರ್ಷಗಳು
ಆಯ್ಕೆ ವಿಧಾನ:
ಮೊದಲು ಅರ್ಜಿ ಸಲ್ಲಿಸಿದವರಿಗೆ ಪ್ರಥಮ ಆದ್ಯತೆ ನೀಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
• ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 5 ಲಕ್ಷರೂ.ಗಳ ಒಳಗಿರಬೇಕು.
ಡ್ರೋನ್ ತರಬೇತಿಯ ವಿವರ:
ಅಭ್ಯರ್ಥಿಗಳಿಗೆ ಉತ್ತರ ಭಾಗದ (ಬೆಳಗಾವಿ ಮತ್ತು ಕಲಬುರಗಿ ಕಂದಾಯ ವಿಭಾಗಗಳು) ಹಾಗೂ ದಕ್ಷಿಣ ಭಾಗದ (ಬೆಂಗಳೂರು ಮತ್ತು ಮೈಸೂರು ಕಂದಾಯ ವಿಭಾಗಗಳು) ಸ್ಥಳಗಳಲ್ಲಿ ಪ್ರತ್ಯೇಕವಾಗಿ ಡ್ರೋನ್ ಉಪಕರಣವನ್ನು ಉಪಯೋಗಿಸುವ ಸಂಬಂಧ 15 ದಿನಗಳ ವಸತಿಯುತ ತರಬೇತಿಯನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಉಲ್ಲೇಖಿಸಲಾಗಿರುವುದಿಲ್ಲ
How to Apply for SC Free Drone Training 2025
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಈ ಕೆಳಗಿನಂತಿದೆ;
ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಅಧಿಕೃತ https://swdservices.karnataka.gov.in/petccoaching/DroneHome.aspx ಜಾಲತಾಣಕ್ಕೆ ಭೇಟಿ ನೀಡಿ.
ನಂತರ ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ.
ಆಧಾರ್ ಸಂಖ್ಯೆ ಹಾಗೂ ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಹಾಗೂ ಕ್ಯಾಪ್ಚವನ್ನು ನಮೂದಿಸಿ ಮುಂದುವರೆಯಿರಿ.
ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಅರ್ಜಿ ಭರ್ತಿ ಮಾಡಿದ ನಂತರ ಮತ್ತೊಮ್ಮೆ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
SC Free Drone Training 2025 Online Application Form Link