Social Welfare Department: 2025-26ನೇ ಸಾಲಿನ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

SC Prestigious Education 2025-26
SC Prestigious Education Application 2025-26

ಸಮಾಜ ಕಲ್ಯಾಣ ಇಲಾಖೆ(Social Welfare Department)ಯಿಂದ 2025-26ನೇ ಸಾಲಿನಲ್ಲಿ ಪ್ರತಿಷ್ಠಿತ ಶಾಲೆಗಳಲ್ಲಿ ಪರಿಶಿಷ್ಟ ಜಾತಿ(SC)ಯ ವಿದ್ಯಾರ್ಥಿಗಳಿಗೆ 6 ನೇ ತರಗತಿಗೆ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಸರ್ಕಾರವು ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾತಿಗೆ ಅವಕಾಶ ಕಲ್ಪಿಸಲಾಗಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಆನ್‌ಲೈನ್ https://swdservices.karnataka.gov.in/EducationPrestigious ಮೂಲಕ ಅರ್ಜಿಗಳನ್ನು ನೋಂದಾಯಿಸಲು ಅವಕಾಶವಿದ್ದು, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ನೋಂದಾಯಿಸಿದ ನಂತರ ದಾಖಲಾತಿಗಳನ್ನು ಆಯಾ ಜಿಲ್ಲೆಯ ಸಂಬಂಧ ಪಟ್ಟ ಕಚೇರಿಗೆ ಅರ್ಜಿ ಸಲ್ಲಿಸಬಹುದು. ಈ ಕುರಿತು ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

ಹಿಂದುಳಿದ ವರ್ಗದವರಿಗೆ ಮೊದಲನೇ ಆದ್ಯತೆ

ಈ ಕೆಳಕಂಡಂತೆ ಹಿಂದುಳಿದ ವರ್ಗದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಪೌರಕಾರ್ಮಿಕರ ಮಕ್ಕಳು, ಸಫಾಯಿ ಕರ್ಮಚಾರಿಗಳವರ ಮಕ್ಕಳು,ಸ್ಮಶಾನಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರ ಮಕ್ಕಳು, ದೇವದಾಸಿಯರ ಮಕ್ಕಳು, ಅಂಗವಿಕಲತೆಯನ್ನು ಹೊಂದಿರುವವರು, ಕೋವಿಡ್-19 ಮುಂತಾದ ಪ್ರಕೃತಿ ವಿಕೋಪದಿಂದ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳು, ಸಿಂಗಲ್ ಫ್ಯಾಮಿಲಿ ಮಕ್ಕಳು,ಯೋಜನಾ ನಿರಾಶ್ರಿತರ ಮಕ್ಕಳು, ಮಾಜಿ ಸೈನಿಕರ ಮಕ್ಕಳು, ಕೊಳೆಗೇರಿಗಳಲ್ಲಿ ವಾಸಿಸುತ್ತಿರುವ ಮಕ್ಕಳು, ಕೃಷಿ ಕಾರ್ಮಿಕರ ಮಕ್ಕಳು, ಸಾಲಭಾದೆಯಿಂದ ಆತ್ಮಹತ್ಯೆಗೆ ಗುರಿಯಾದವರ ಮಕ್ಕಳು, ದೌರ್ಜನ್ಯದಲ್ಲಿ ನೊಂದವರ ಮಕ್ಕಳು, ಜೀತ ವಿಮುಕ್ತ ಮಕ್ಕಳಿಗೆ ಮೊದಲನೇ ಆದ್ಯತೆ ನೀಡಲಾಗುವುದರಿಂದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವವರು ಸಂಬಂಧ ಪಟ್ಟ ದಾಖಲಾತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -03-05-2025

ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ:

  • ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ.60 ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು.
  • ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ.ಗಳ ಒಳಗಿರಬೇಕು.

ಆಯ್ಕೆ ವಿಧಾನ:

  • ಡಯಟ್ ಮೂಲಕ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ.
  • ಪ್ರವೇಶ ಪರೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಆಯ್ಕೆ ವಿದ್ಯಾರ್ಥಿಗಳನ್ನು ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿ ಶುಲ್ಕ ಉಲ್ಲೇಖಿಸಲಾಗಿಲ್ಲ.

How to Apply for SC Prestigious Education 2025-26

ಅರ್ಜಿ ಸಲ್ಲಿಸುವ ವಿಧಾನ ಇಂತಿದೆ;

  • ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಆನ್‌ಲೈನ್ https://swdservices.karnataka.gov.in/EducationPrestigious ಗೆ ಭೇಟಿ ನೀಡಿ.
  • ಪ್ರಸಕ್ತ ವರ್ಷದ ಪ್ರತಿಷ್ಠಿತ ಅರ್ಜಿಗೆ ನೋಂದಾಯಿಸಲು ಇಲ್ಲಿ ಕ್ಲಿಕ್ ಮಾಡಿ. ಲಿಂಕ್ ಮೇಲೆ ಟ್ಯಾಪ್ ಮಾಡಿ. • ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ. ನಂತರ ಕೇಳಲಾಗುವ ಸ್ವ ವಿವರಗಳನ್ನು ಭರ್ತಿ ಮಾಡಿ. ಭಾವಚಿತ್ರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ಕೊನೆಯದಾಗಿ ಅರ್ಜಿಯನ್ನು ಪರಿಶೀಲಿಸಿ ಸಲ್ಲಿಸಿ.

ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಕಛೇರಿಗಳಿಗೆ ಕಛೇರಿ ವೇಳೆಯಲ್ಲಿ ಸಲ್ಲಿಸಬಹುದು.

Important Direct Links:

SC Prestigious Education Online Application Form 2025-26 LinkApply Now
Official Websitesw.kar.nic
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment