ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ/ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಅಂತರ್ಜಾಲ https://swd.karnataka.gov.in/ನ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಗ್ರೇಡ್-1 ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಉಲ್ಲೇಖಿಸಲಾಗಿರುವುದಿಲ್ಲ.
ಪ್ರೋತ್ಸಾಹಧನದ ವಿವರ:
- ದ್ವಿತೀಯ ಪಿಯುಸಿ(2nd PUC), 3 ವರ್ಷಗಳ ಪಾಲಿಟೆಕ್ನಿಕ್ ಡಿಪ್ಲೊಮಾ(Diploma) ವಿದ್ಯಾರ್ಥಿಗಳಿಗೆ – 20,000 ರೂ.
- ಪದವಿ(Degree) ವಿದ್ಯಾರ್ಥಿಗಳಿಗೆ – 25,000 ರೂ.
- ಎಂಎ(MA), ಎಂ.ಎಸ್ಸಿ(M.Sc), ಇತ್ಯಾದಿ ಯಾವುದೇ ಸ್ನಾತಕೋತ್ತ(PG)ರ ಕೋರ್ಸುಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ – 30,000 ರೂ.
- ಕೃಷಿ(Agri), ಇಂಜಿನಿಯರಿಂಗ್(Engineering), ಪಶುವೈದ್ಯಕೀಯ, ಔಷಧ ಕೋರ್ಸುಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ – 35,000 ರೂ.
ಅರ್ಹತೆ:
ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ/ಸ್ನಾತಕೋತ್ತರ ಪದವಿ ಹಾಗೂ ವೃತ್ತಿಪರ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ, ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು.
How to Apply for SC Prize Money 2025?
ಅರ್ಜಿ ಸಲ್ಲಿಸುವ ವಿಧಾನ;
- ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್ https://swdservices.karnataka.gov.in/PrizeMoneyClientApp/ಗೆ ಭೇಟಿ ನೀಡಿ.

- ಅಪ್ಲಿಕೇಶನ್ ವಿಭಾಗದಲ್ಲಿ ನೋಂದಣಿ ಅಥವಾ ಲಾಗಿನ್ ಆಗಿ.
- ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲೂಕಿನ/ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ.
Important Direct Links:
SC Prize Money 2025 Online Application Form Link | Apply Now |
Official Website | sw.kar.nic.in |
More Updates | KarnatakaHelp.in |