ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ವಸತಿಯುತ ಸಬ್ ಇನ್ಸ್‌ಪೆಕ್ಟರ್ (PSI) ಪೂರ್ವ ನೇಮಕಾತಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
2024-25 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ವಸತಿಯುತ ಸಬ್ ಇನ್ಸ್‌ಪೆಕ್ಟರ್ (PSI) ಪ್ಯಾರ ಮಿಲಿಟರಿ ಪೂರ್ವ ನೇಮಕಾತಿ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ. ಪದವಿ ಪಡೆದುಕೊಂಡು ಪೋಲೀಸ್ ಇಲಾಖೆಯಲ್ಲಿ ಕನಿಷ್ಠ 5 ವರ್ಷಗಳ ಕೆಲಸ ಮಾಡಿರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬಗ್ಗೆ ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ https://petc.kar.nic.in ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. SC PSI Free Training 2024-25 ಈ ತರಬೇತಿ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿರಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ – ಅಗಸ್ಟ್ 31, 2024
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕನಿಷ್ಠ ಪದವಿ ಪಡೆದುಕೊಂಡಿರಬೇಕು.
ಪೋಲೀಸ್ ಇಲಾಖೆಯಲ್ಲಿ ಕನಿಷ್ಠ 5 ವರ್ಷಗಳ ಕೆಲಸ ನಿರ್ವಹಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಟ 21 ರಿಂದ ಗರಿಷ್ಠ 32 ವರ್ಷಗಳ ಒಳಗಿರಬೇಕು.
ಎತ್ತರ – ಪುರುಷರಿಗೆ ಕನಿಷ್ಠ – 163 ಸೆಂ.ಮೀ ಮಹಿಳಿರಿಗೆ ಕನಿಷ್ಠ – 153 ಸೆಂ.ಮೀ
ತೂಕ
ಪುರುಷರಿಗೆ ಕನಿಷ್ಠ – 50kg ಮಹಿಳಿರಿಗೆ ಕನಿಷ್ಠ – 45kg
ಆಯ್ಕೆ ವಿಧಾನ:
ಪದವಿಯಲ್ಲಿ ಗಳಿಸಿರುವ ಅಂಕಗಳ ಅಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.