ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ದ್ವಿತೀಯ ದರ್ಜೆ ಗುಮಾಸ್ತರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ ಒಟ್ಟು 123 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧಿಕೃತ ವೆಬ್ ಸೈಟ್ https://scdccbank.com/online_application.html ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಲೇಖನದಲ್ಲಿ ನಾವು ನೇಮಕಾತಿಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಕುರಿತು ಎಲ್ಲ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of SCDCC Bank Recruitment 2024
Organization Name – South Canara District Central Co-operative Bank
Post Name – Second Division Clerk(SDA)
Number of Posts : 123
Application Process: Online
Job Location – Dakshina Kannada
ನೇಮಕಾತಿಯ ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 01, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 18, 2024
ವಿದ್ಯಾರ್ಹತೆ:
ಮಾನ್ಯತೆ ಪಡೆದ ಕರ್ನಾಟಕ ರಾಜ್ಯದ ಅಂಗೀಕೃತ ವಿಶ್ವವಿದ್ಯಾಲಯದ ಪದವಿ ಅಥವಾ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಕನಿಷ್ಟ 50% ಹಾಗೂ ಮೇಲ್ಪಟ್ಟು ಅಂಕ ಗಳಿಸಿರಬೇಕು. ಕಂಪ್ಯೂಟರ್ ಅಪರೇಶನ್ ಮತ್ತು ಅಪ್ಲಿಕೇಶನ್ ಜ್ಞಾನದೊಂದಿಗೆ ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಡಿಪ್ಲೋಮ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್ ತರಬೇತಿ ಪಡೆದ ಸರ್ಟಿಫಿಕೇಟ್ ಹೊಂದಿರಬೇಕು.
ವಯೋಮಿತಿ:
- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
- ಜಾತಿ/ ಪ.ಪಂಗಡದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- ಇತರೆ ಹಿಂದುಳಿದ ಜಾತಿ ಮತ್ತು ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ವೇತನ:
ರೂ 24,910 ರಿಂದ ರೂ. 55,655 ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಸಂದರ್ಶನ
ಶುಲ್ಕದ ವಿವರ :
- ಪ.ಜಾತಿ, ಪ.ಪಂಗಡದ ಅಭ್ಯರ್ಥಿಗಳಗೆ – ರೂ. 590
- ಉಳಿದ ಎಲ್ಲಾ ಸಾಮಾನ್ಯ ಅಭ್ಯರ್ಥಿಗಳಗೆ – ರೂ. 1180
How to Apply for SCDCC Bank Recruitment 2024
- SCDCC ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: https://scdccbank.com/recruitment_notification.html
- “ಆನ್‌ಲೈನ್ ಅರ್ಜಿ” ಲಿಂಕ್ ಕ್ಲಿಕ್ ಮಾಡಿ.
- ಅಗತ್ಯವಿರುವ ವಿವರಗಳನ್ನು ನಮೂದಿಸಿ, ಉದಾಹರಣೆಗೆ:
- ವೈಯಕ್ತಿಕ ಮಾಹಿತಿ
- ಶೈಕ್ಷಣಿಕ ಅರ್ಹತೆ
- ಉದ್ಯೋಗ ಅನುಭವ (ಯಾವುದಾದರೂ ಇದ್ದರೆ)
- ಸಂಪರ್ಕ ಮಾಹಿತಿ
- ಅರ್ಜಿ ಶುಲ್ಕವನ್ನು ಪಾವತಿಸಿ. ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
- ನಿಮ್ಮ ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ:
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್
-> ಉತ್ಕೃಷ್ಟ ಸಹಕಾರಿ ಸೌಧ, ಕೆ.ಎಸ್. ರಾವ್ ರಸ್ತೆ, ಕೊಡೈಬೈಲ್, ಮಂಗಳೂರು – 575003
-> ಫೋನ್: (0824) – 2440381, 2440882
Important Direct Links:
Official Notification PDF | Download |
Online Application form | Apply Here |
Official Website | scdccbank.com |
More Updates | Karnataka Help.in |