ರಾಜ್ಯದ ಸರ್ಕಾರಿ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರವು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಓದುವುದರ ಜೊತೆಗೆ ಶಿಷ್ಯವೇತನದ ಮೂಲಕ ವಿದ್ಯಾರ್ಥಿಗಳಗೆ ಆರ್ಥಿಕವಾಗಿ ಸಹಾಯ ಮಾಡುತ್ತಿದೆ. ಈ ವಿನೂತನ ಯೋಜನೆಯ ಮೂಲಕ ವಿದ್ಯಾರ್ಥಿಗಳನ್ನು ಓದುವುದರ ಜೊತೆಗೆ ವಿವಿಧ ಕೌಶಲ್ಯಗಳನ್ನು ಪಡೆದುಕೊಳ್ಳಲು ಉತ್ತೇಜಿಸುವ ಸಲುವಾಗಿ ಈ ಯೋಜನೆಯನ್ನು ಜಾರಿ ಮಾಡಿದೆ.
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸಾಮಾನ್ಯ ಕೋರ್ಸ್‌ಗಳ ಜೊತೆಗೆ ಒಂದು ಕೌಶಲ ವಿಷಯ ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಒಂದು ವರ್ಷದವರೆಗೆ (ಎರಡು ಸೆಮಿಸ್ಟರ್) ಪ್ರತಿ ತಿಂಗಳು ₹11 ಸಾವಿರದಿಂದ ₹17 ಸಾವಿರದವರೆಗೆ ಶಿಷ್ಯವೇತನ ಸಿಗಲಿದೆ ಇಂದು ರಾಜ್ಯ ಸರ್ಕಾರವು ತನ್ನ ಪ್ರಕಟಣೆಯ ಮೂಲಕ ತಿಳಿಸಿದೆ.
ರಾಜ್ಯದ ಉನ್ನತ ಶಿಕ್ಷಣದಲ್ಲಿ ಸಾಮಾನ್ಯ ಪದವಿ ಕೋರ್ಸ್‌ಗಳ ಜೊತೆಗೆ ಕೌಶಲಾಧಾರಿತ ವಿಷಯಗಳ ಅಧ್ಯಯನಕ್ಕೂ ಅವಕಾಶ ಮಾಡಿಕೊಡಲಾಗಿದ್ದು, ಇದೇ ಶೈಕ್ಷಣಿಕ ಸಾಲಿನಿಂದ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಕೊನೆಯ ಐದು ಮತ್ತು ಆರನೇ ಸೆಮಿಸ್ಟರ್‌ನಲ್ಲಿ ಶಿಷ್ಯ ವೇತನದ ಸೌಲಭ್ಯ ದೊರಕಲಿದೆ.
ಹತ್ತು ಮಂದಿ ನಿವೃತ್ತ ಐಎಎಸ್ ಅಧಿಕಾರಿಗಳು ಸ್ಥಾಪಿಸಿರುವ ಕ್ರಿಸ್ಪ್ ಜೊತೆ ಉನ್ನತ ಶಿಕ್ಷಣದಲ್ಲಿ ಕೌಶಲಾಧಾರಿತ ಕೋರ್ಸ್‌ಗಳನ್ನು ಪರಿಚಯಿಸುವ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ ಹಾಕಿದೆ. ಮೊದಲ ವರ್ಷ 60 ಕಾಲೇಜುಗಳಲ್ಲಿ 3,600 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತಿದೆ. ಮೂರು ವರ್ಷಗಳಲ್ಲಿ 239 ಕಾಲೇಜುಗಳಿಗೆ ಯೋಜನೆ ವಿಸ್ತರಿಸಲಾಗುವುದು. 2026-27ರ ವೇಳೆಗೆ 14,340 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ಗುರಿ ಹೊಂದಲಾಗಿದೆ ಎಂದು ಸರ್ಕಾರ ತಿಳಿಸಿದೆ.
This scholarship is very good use this Karnataka students all problems take your own
Karnataka students all problems take your own life success benefits