ಸರಕಾರಿ ಸ್ವಾಮ್ಯದ ಕಂಪನಿಯಲ್ಲಿ ಉದ್ಯೋಗ ಅರಸುತ್ತಿರುವ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (Solar Energy Corporation of India) ಅಧಿಕೃತ ಅಧಿಸೂಚನೆಯ ಮೂಲಕ ಸೀನಿಯರ್ ಎಂಜಿನಿಯರ್, ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್, ಅಡಿಷನಲ್ ಜನರಲ್ ಮ್ಯಾನೇಜರ್, ಡೆಪ್ಯೂಟಿ ಮ್ಯಾನೇಜರ್ ಹಾಗೂ ಜೂನಿಯರ್ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 25ರ ಒಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ, ವಯೋಮಿತಿ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವುದು ಹೇಗೆ ? ಸೇರಿದಂತೆ ಸಂಪೂರ್ಣ ಮಾಹಿತಿಗಾಗಿ ಪೂರ್ಣ ಸುದ್ದಿಯನ್ನು ಓದಿರಿ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಸೆಪ್ಟೆಂಬರ್ 25, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್ 24, 2025
ಶೈಕ್ಷಣಿಕ ಅರ್ಹತೆ:
ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ ಅಧಿಸೂಚನೆ ಹೊರಡಿಸಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಗ್ರಿ, ಡಿಪ್ಲೋಮಾ, ಬಿ.ಇ, ಬಿ.ಟೆಕ್ ಕೋರ್ಸ್ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ:
ಅಡಿಷನಲ್ ಜನರಲ್ ಮ್ಯಾನೇಜರ್ – 48
ಡೆಪ್ಯೂಟಿ ಮ್ಯಾನೇಜರ್ – 35
ಮ್ಯಾನೇಜರ್ – 40
ಡೆಪ್ಯೂಟಿ ಜನರಲ್ ಮ್ಯಾನೇಜರ್ – 35
ಸೀನಿಯರ್ ಎಂಜಿನಿಯರ್ – 28
ಜೂನಿಯರ್ ಸೂಪರ್ ವೈಸರ್ – 28
ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪ.ಜಾತಿ, ಪ.ಪಂಗಡ ಸಮುದಾಯದವರಿಗೆ 5 ವರ್ಷ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ:
ಸ್ಕ್ರೀನಿಂಗ್ ಪರೀಕ್ಷೆ
ಲಿಖಿತ ಪರೀಕ್ಷೆ
ವ್ಯಾಪಾರ ಪರೀಕ್ಷೆ
ಕೌಶಲ್ಯ ಪರೀಕ್ಷೆ
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ, ಮಾಜಿ ಸೈನಿಕರು, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕ ಇರುವುದಿಲ್ಲ.
ಮ್ಯಾನೇಜರ್, ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ – ಇತರ ಎಲ್ಲಾ ಅಭ್ಯರ್ಥಿಗಳು: ರೂ.1000/-
ಜೂನಿಯರ್ ಫೋರ್ಮನ್/ಸೂಪರ್ವೈಸರ್ ಹುದ್ದೆಗಳಿಗೆ – ಇತರ ಎಲ್ಲಾ ಅಭ್ಯರ್ಥಿಗಳು: ರೂ.600/-
ಪಾವತಿ ವಿಧಾನ: ಆನ್ಲೈನ್
ಸಂಬಳದ ವಿವರಗಳು:
ಅಡಿಷನಲ್ ಜನರಲ್ ಮ್ಯಾನೇಜರ್ – ರೂ.100000-260000/-
ಡೆಪ್ಯೂಟಿ ಜನರಲ್ ಮ್ಯಾನೇಜರ್ – ರೂ. 90000-240000/-
ಮ್ಯಾನೇಜರ್ – 70000-200000/-
ಡೆಪ್ಯೂಟಿ ಜನರಲ್ ಮ್ಯಾನೇಜರ್ – 60000-180000/-
ಸೀನಿಯರ್ ಎಂಜಿನಿಯರ್ – 50000-160000/-
ಜೂನಿಯರ್ ಸೂಪರ್ ವೈಸರ್ – 22000-80000/-
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲನೆಯದಾಗಿ ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್ಇಸಿಐ) ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ (ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ).
ಆನ್ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
ಕೆಳಗೆ ನೀಡಲಾಗಿರುವ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೀವು ಅರ್ಜಿ ಸಲ್ಲಿಸ ಬಯಸುವ ಹುದ್ದೆಗಳಿಗೆ Apply ಆಯ್ಕೆಯನ್ನು ಕ್ಲಿಕ್ ಮಾಡಿ.
ಅಲ್ಲಿ ಕೇಳಿರುವ ಸ್ವ-ವಿವರ, ವಿಳಾಸ, ಅರ್ಹತೆ ಹಾಗೂ ಉದ್ಯೋಗ ಅನುಭವದ ದಾಖಲಾತಿಗಳನ್ನು ಅಪ್ಲೋಡ್ ಮಾಡಿ ಮಾಹಿತಿಗಳನ್ನು ನೀಡಿರಿ.
ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
ಎಸ್ಇಸಿಐ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕೊನೆಯದಾಗಿ Submit ಬಟನ್ ಮೇಲೆ ಕ್ಲಿಕ್ ಮಾಡಿ. ಬಹು ಮುಖ್ಯವಾಗಿ ಅರ್ಜಿ ಸಂಖ್ಯೆ ಅಥವಾ ಹೆಚ್ಚಿನ ಉಲ್ಲೇಖಕ್ಕಾಗಿ ವಿನಂತಿ ಸಂಖ್ಯೆಯನ್ನು ಸೆರೆಹಿಡಿಯಿರಿ.
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.
H