Self Employment Loan Scheme: ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದಿಂದ ಸಹಾಯಧನ, ಸಾಲಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿಗೆ ವಿವಿಧ ನಿಗಮಗಳಿಂದ ವೈಯಕ್ತಿಕ ಸಾಲ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ

Published on:

Updated On:

2025-26ನೇ ಸಾಲಿಗೆ ಸಂಬಂಧಿಸಿದಂತೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಗೆ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ನೀಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಅಧಿಕೃತ ವೆಬ್ಸೈಟ್ https://sevasindhuservices.karnataka.gov.in/ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಸದರಿ ಯೋಜನೆಯ ಕುರಿತಂತೆ ಅರ್ಹತಾ ಮಾನದಂಡ, ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆಯ ಪ್ರಕಟಣೆಯ ದಿನಾಂಕ – 02-06-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 30-06-2025

ಯೋಜನೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಡಿಯಲ್ಲಿ – ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಡಿಯಲ್ಲಿ – ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಅಡಿಯಲ್ಲಿ – ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಅಡಿಯಲ್ಲಿ – ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

  • ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000 ರೂ., ಪಟ್ಟಣ ಪ್ರದೇಶದವರಿಗೆ 1,20,000 ರೂ. ಗಳ ಒಳಗಿರಬೇಕು.
  • 2023-24 ಮತ್ತು 2024-25ನೇ ಸಾಲಿನಲ್ಲಿ ಅರ್ಜಿಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು

ಸಹಾಯಧನ ಹಾಗೂ ಸಬ್ಸಿಡಿ ಮೊತ್ತ:

  • ಕನಿಷ್ಠ 1 ಲಕ್ಷದಿಂದ ಗರಿಷ್ಠ 2 ಲಕ್ಷರೂ. ಗಳವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.
  • 1 ಲಕ್ಷರೂ. ಗಳವರೆಗಿನ ಸಾಲದಲ್ಲಿ – ಶೇ.20ರಷ್ಟು (ಗರಿಷ್ಠ 20,000 ರೂ.) ಸಹಾಯಧನ (ಸಬ್ಸಿಡಿ) ಹಾಗೂ ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತದೆ.
  • 1.01 ಲಕ್ಷದಿಂದ ರೂ.2 ಲಕ್ಷರೂ. ಗಳವರೆಗಿನ ಸಾಲದಲ್ಲಿ – ಶೇ.15 ರಷ್ಟು (ಕನಿಷ್ಠ 20,000 ರೂ. ಗಳಿಂದ ಗರಿಷ್ಠ 30,000ರೂ.) ಸಹಾಯಧನ(ಸಬ್ಸಿಡಿ) ಹಾಗೂ ಉಳಿಕೆ ಮೊತ್ತ ಶೇ.4 ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ನೀಡಲಾಗುತ್ತದೆ.

ವಿಶೇಷ ಸೂಚನೆ:

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ

How to Apply for Self Employment Loan Scheme 2025

ಅರ್ಜಿ ಸಲ್ಲಿಸುವ ವಿಧಾನ;

ಆಯಾ ನಿಗಮಗಳಿಗೆ ಸೇರಿದ ಅರ್ಜಿದಾರರು ನಿಮ್ಮ ಹತ್ತಿರದ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ.

  • ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/ ಗೆ ಭೇಟಿ ನೀಡಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ. ಅರ್ಜಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮdbcdc.karnataka.gov.in
ಕ.ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ಧಿ ನಿಗಮkaad.karnataka.gov.in
ಕ.ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮkmmd.karnataka.gov.in
ಕ.ಸವಿತಾ ಸಮಾಜ ಅಭಿವೃದ್ಧಿ ನಿಗಮkssd.karnataka.gov.in
More UpdatesKarnatakaHelp.in
About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ ಶೈಕ್ಷಣಿಕ ಸುದ್ದಿಗಳನ್ನು ತಲುಪಿಸುವ ಮಾಧ್ಯಮ.

Leave a Comment