ಪಂಚಾಯತಿಯಲ್ಲಿ ಬಿಲ್‌ಕಲೆಕ್ಟರ್‌, ಡಾಟಾ ಎಂಟ್ರಿ ಆಪರೇಟರ್ ಉದ್ಯೋಗಾವಕಾಶ

ದ್ವಿತೀಯ ಪಿಯುಸಿ ಅರ್ಹತೆ

Published on:

ಶಿವಮೊಗ್ಗ: ಇಲ್ಲಿನ ಜಿಲ್ಲಾ ಪಂಚಾಯತ್ ವ್ಯಾಪ್ತಿಯ 07 ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಒಟ್ಟು 52 ಹುದ್ದೆಗಳ (21 ಕರವಸೂಲಿಗಾರ ಮತ್ತು 31 ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್) ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದ್ವಿತೀಯ ಪಿಯುಸಿ ಅರ್ಹತೆ ಹಾಗೂ ಕಂಪ್ಯೂಟರ್‌ ಸರ್ಟಿಫಿಕೇಟ್‌ ಹೊಂದಿರುವವರು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಜಿಲ್ಲಾ ಪಂಚಾಯತ್‌ ಅಧಿಕೃತ ಜಾಲತಾಣ https://shivamogga.nic.in/ದಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಜೊತೆಗೆ ನಿಗದಿತ ದಾಖಲಾತಿಗಳನ್ನು ಲಗತ್ತಿಸಿ, ತಾವು ಒಳಪಡುವ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ(ಪಿಡಿಓ) ಸೆ.25ರೊಳಗೆ ಸಲ್ಲಿಸುವ ಮೂಲಕ ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ- ಆಗಸ್ಟ್‌ 27
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 25
  • ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ- ಸೆಪ್ಟೆಂಬರ್ 25

ಶೈಕ್ಷಣಿಕ ಅರ್ಹತೆ:

ಕರವಸೂಲಿಗಾರ(ಬಿಲ್ ಕಲೆಕ್ಟರ್) ಹುದ್ದೆಗೆ; ಕನ್ನಡವನ್ನು ಒಂದು ಭಾಷೆಯನ್ನಾಗಿ ಅಭ್ಯಾಸಿಸಿ ದ್ವಿತೀಯ ಪಿಯುಸಿ (2nd PUC) ಅಥವಾ ಸಿ.ಬಿ.ಎಸ್.ಸಿ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ 03 ತಿಂಗಳ ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.

ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ; ಕನ್ನಡವನ್ನು ಒಂದು ಭಾಷೆಯನ್ನಾಗಿ ಅಭ್ಯಾಸಿಸಿ ದ್ವಿತೀಯ ಪಿಯುಸಿ (2nd PUC) ಅಥವಾ ಸಿ.ಬಿ.ಎಸ್.ಸಿ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ 06 ತಿಂಗಳ ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು.

ವಯೋಮಿತಿ:

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ ವಿವರಗಳು ಈ ಕೆಳಗಿನಂತಿವೆ (05 ವರ್ಷಗಳ ಸಡಿಲಿಕೆಯನ್ನು ಒಳಗೊಂಡಂತೆ):

  • ಸಾಮಾನ್ಯ ವರ್ಗ (General Merit): ಗರಿಷ್ಠ 40 ವರ್ಷಗಳು
  • ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ: ಗರಿಷ್ಠ 43 ವರ್ಷಗಳು
  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1: ಗರಿಷ್ಠ 45 ವರ್ಷಗಳು

(ವಿಶೇಷ ಚೇತನ/ವಿಧವೆ/ಜೀತಕಾರ್ಮಿಕ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇರುತ್ತದೆ. ಮಾಜಿ ಸೈನಿಕರಿಗೆ ಅವರು ಸಲ್ಲಿಸಿದ ಸೇವೆಯ ಅವಧಿಯೊಂದಿಗೆ ಹೆಚ್ಚುವರಿ 3 ವರ್ಷಗಳ ರಿಯಾಯಿತಿ ಇರುತ್ತದೆ).

ಆಯ್ಕೆ ಪ್ರಕ್ರಿಯೆ:

ಕರವಸೂಲಿಗಾರ ಹುದ್ದೆಗೆ; ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ (ಪಿಯುಸಿ/ತತ್ಸಮಾನ ಪರೀಕ್ಷೆ) ಗಳಿಸಿದ ಗರಿಷ್ಠ ಅಂಕಗಳು ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ; ನಿಗದಿತ ವಿದ್ಯಾರ್ಹತೆಯಲ್ಲಿ (ಪಿಯುಸಿ/ತತ್ಸಮಾನ ಪರೀಕ್ಷೆ) ಗಳಿಸಿದ ಅಂಕಗಳ 50% ರಷ್ಟು ಹಾಗೂ ಪ್ರತಿಷ್ಠಿತ ಐ.ಎಸ್.ಸಿ. ಸಂಸ್ಥೆಗಳ ಮೂಲಕ ನಡೆಸಲಾಗುವ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ 50% ಅಂಕಗಳನ್ನು ಒಳಗೊಂಡ ಒಟ್ಟು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಸಂಬಳ:

ಸರ್ಕಾರದಿಂದ ನಿಗದಿಪಡಿಸಿದ ವೇತನ ಶ್ರೇಣಿ ಅನ್ವಯವಾಗುತ್ತದೆ.

ಅರ್ಜಿ ಶುಲ್ಕ:

  • ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ: ರೂ. 50/-
  • ಇತರ ಎಲ್ಲಾ ಅಭ್ಯರ್ಥಿಗಳಿಗೆ: ರೂ. 100/-

ಪಾವತಿ ವಿಧಾನ: “ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಶಿವಮೊಗ್ಗ” ಇವರ ಹೆಸರಿಗೆ ಡಿಮ್ಯಾಂಡ್ ಡ್ರಾಫ್ಟ್ (D.D.) ಪಡೆದು ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸಬೇಕು. ಪಾವತಿಸಿದ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ ಎಂದು ಅಧಿಕೃತ ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಹೇಗೆ.?

ಆಸಕ್ತ ಅಭ್ಯರ್ಥಿಗಳು ಅಧಿಕೃತ ಜಾಲತಾಣ https://shivamogga.nic.in/en/ದಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಜತೆಗೆ ನಿಗದಿತ ದಾಖಲೆಗಳನ್ನು ಲಗತ್ತಿಸಿ ಅವುಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಶಿವಮೊಗ್ಗ ರವರ ಹೆಸರಿಗೆ ಡಿ.ಡಿ ಪಡೆದು ಅರ್ಜಿಯೊಂದಿಗೆ ಲಗತ್ತಿಸಿ. ತಾವು ಒಳಪಡುವ ಗ್ರಾಮ ಪಂಚಾಯತಿಯ ಪಿಡಿಓಗೆ ಅರ್ಜಿ ನಮೂನೆಯನ್ನು ಸಲ್ಲಿಸಿ, ಸ್ವೀಕೃತಿಯನ್ನು ಪಡೆದಿಟ್ಟುಕೊಳ್ಳಬೇಕು.

ಪ್ರಮುಖ ಲಿಂಕ್‌ಗಳು:

ಅಧಿಕೃತ ಅಧಿಸೂಚನೆ ಪಿಡಿಎಫ್‌ಡೌನ್ಲೋಡ್‌ ಮಾಡಿ
ಅರ್ಜಿ ನಮೂನೆ ಪಿಡಿಎಫ್‌ಡೌನ್ಲೋಡ್‌ ಮಾಡಿ
ಅಧಿಕೃತ ಜಾಲತಾಣshivamogga.nic.in
ಮತ್ತಷ್ಟು ಸುದ್ದಿಗಳಿಗಾಗಿಕರ್ನಾಟಕಹೆಲ್ಪ್.ಇನ್
About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳ ಅನುಭವ.

3 thoughts on “ಪಂಚಾಯತಿಯಲ್ಲಿ ಬಿಲ್‌ಕಲೆಕ್ಟರ್‌, ಡಾಟಾ ಎಂಟ್ರಿ ಆಪರೇಟರ್ ಉದ್ಯೋಗಾವಕಾಶ”

Leave a Comment