Silk Growers and Farmers Service Cooperative Society Recruitment 2023
Silk Growers and Farmers Service Cooperative Society Recruitment 2023: ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಕಂ ಮಾರಾಟ ಗುಮಾಸ್ತ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. Silk Growers and Farmers Service Cooperative Society Notification 2023 ಇಲಾಖೆ ಈಗಾಗಲೇ ಅಧಿಕೃತ ಅಧಿಸೂಚನೆಯನ್ನು ನೇಮಕಾತಿಗಾಗಿ ಬಿಡುಗಡೆ ಮಾಡಿದ್ದು, ಅರ್ಜಿ ಸಲ್ಲಿಕೆ 27 ನವೆಂಬರ್ 2023 ರಿಂದ ಪ್ರಾರಂಭ. ಆಸಕ್ತರು ಆಫ್ ಲೈನ್ ಮೂಲಕ ಅರ್ಜಿ ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
ಈ ಲೇಖನದಲ್ಲಿ ನಾವು ಈ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ಈ ಆರ್ಟಿಕಲ್’ನಲ್ಲಿ ನೀಡಿದ್ದೇವೆ. ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಈ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಇತ್ತೀಚಿನ ಖಾಲಿ ಹುದ್ದೆಗೆ ಸಂಬಂಧಿಸಿದ ಎಲ್ಲಾ ಮಾಹಿತಿಗಾಗಿ, ಈ ಲೇಖನವನ್ನು ಕೊನೆಯವರೆಗೂ ಎಚ್ಚರಿಕೆಯಿಂದ ಓದಿ ಮತ್ತು ಇದನ್ನು ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
Silk Growers and Farmers Service Cooperative Society Recruitment 2023
Organization Name – Silk Growers and Farmers Service Cooperative Society Post Name – Junior Assistant cum sales Clerk Total Vacancy – 05 Application Process: Offline Job Location – Bengaluru
Silk Growers And Farmers Service Cooperative Society Recruitment 2023
Important Dates: ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 27.11.2023 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ – 28.12.2023
ಶೈಕ್ಷಣಿಕ ಅರ್ಹತೆ: ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಯು ಯಾವುದೇ ಪದವಿ (Any Degree) ಶೈಕ್ಷಣಿಕ ಅರ್ಹತೆ ಪಡೆದಿರಬೇಕು.
ವಯಸ್ಸಿನ ಮಿತಿ: ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ನೇಮಕಾತಿ ನಿಯಮಗಳ ಪ್ರಕಾರ ಈ ಕೆಳಗಿನ ವಯೋಮಿತಿಯನ್ನ ಹೊಂದಿರಬೇಕು
ಪ.ಜಾತಿ/ಪ.ಪಂಗಡ/ಪವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ 2ಎ, 2ಬಿ, 3ಎ, 3ಬಿ ವರ್ಗಗಳ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ದಾಖಲಾತಿ ಪರಿಶೀಲನೆ
ಸಂಬಳ: ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತದ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಸಂಬಳವನ್ನ ಈ ವೇತನ ಶ್ರೇಣಿ ಪ್ರಕಾರ ನಿಗದಿಪಡಿಸಲಾಗಿರುತ್ತದೆ.
ವೇತನ ಶ್ರೇಣಿ: ರೂ. 21400-500-22400-550-24600-600-27000-650-29600-750- 32600-850-36000-950-39800-1100-42000/-
ಅರ್ಜಿ ಶುಲ್ಕ: ಸಂಘದ ಕೇಂದ್ರ ಕಛೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ರೂ. 1000/- ಪಾವತಿ ಮಾಡಿ ಅರ್ಜಿಯನ್ನು ಪಡೆಯಬಹುದು. ಈ ಹಣವನ್ನು ಯಾವುದೇ ಸಂದರ್ಭದಲ್ಲಿ ಹಿಂದಿರಿಗಿಸಲಾಗುವದಿಲ್ಲ.
How to Apply
ಅರ್ಹ ಅಭ್ಯರ್ಥಿಗಳು ಈ ಅಧಿಸೂಚನೆಯೊಂದಿಗೆ ನೀಡಿರುವ ನಮೂನೆಯಲ್ಲಿ ತಮ್ಮ ಸಂಪೂರ್ಣ ಮಾಹಿತಿಯನ್ನು ಭರ್ತಿಮಾಡಿ ಸೂಕ್ತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿಕೊಡಬೇಕು ಅಥವಾ ಖುದ್ದಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು.
ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿ. ಬಸ್ ನಿಲ್ದಾಣ ಪಕ್ಕ, ಸರ್ಜಾಪುರ, ಆನೇಕಲ್ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ 562125