DOM Silk Reeling and Spinning Subsidy Scheme Online Application Form 2025-26
ರೇಷ್ಮೆನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ರಾಜ್ಯದ ಅಲ್ಪಸಂಖ್ಯಾತರನ್ನು ಪ್ರೋತ್ಸಾಹಿಸಲು 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸುವ ಸಲುವಾಗಿ ಅಗತ್ಯವಿರುವ ದುಡಿಮೆ ಬಂಡವಾಳ (working capital) ಮತ್ತು ಮೂಲಭೂತ ಸೌಕರ್ಯವನ್ನು ಒದಗಿಸಲು ನಿಗಮದಿಂದ 2 ಲಕ್ಷರೂ.ವರೆಗೆ ಸಾಲ ನೀಡಲಾಗುವುದು. ಇದರಲ್ಲಿ ಶೇ. ಸಹಾಯಧನವನ್ನು ಒದಗಿಸಲಾಗುವುದು. ಸದರಿ ಯೋಜನೆಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು KMDC ಅಧಿಕೃತ ಜಾಲತಾಣ https://kmdconline.karnataka.gov.in/Portal/home ಕ್ಕೆ ಭೇಟಿ ನೀಡಿ. ಅಕ್ಟೋಬರ್ 16 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 16, 2025
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 55 ವರ್ಷಗಳು
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು:
ಅರ್ಜಿದಾರ ಅಲ್ಪಸಂಖ್ಯಾತರಾಗಿರಬೇಕು.
ಅರ್ಜಿದಾರ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
ಅರ್ಜಿದಾರನ ಕುಟುಂಬದ ವಾರ್ಷಿಕ ಆದಾಯವು 6 ಲಕ್ಷರೂ. ಗಳ ಮಿತಿಯಲ್ಲಿರಬೇಕು.
ಅರ್ಜಿದಾರರ ಕುಟುಂಬದ ಸದಸ್ಯರಲ್ಲಿ ಯಾರೊಬ್ಬರು ಕೇಂದ್ರ ಅಥವಾ ರಾಜ್ಯ ಸರ್ಕಾರ ನೌಕರಿಯಲ್ಲಿರಬಾರದು.
ಅರ್ಜಿದಾರರ ಅಥವಾ ಅವರ ಕುಟುಂಬದ ಸದಸ್ಯರು (ಅರಿವು ಮತ್ತು ವಿದೇಶ ವಿದ್ಯಾಭ್ಯಾಸ ಸಾಲ ಯೋಜನೆ ಹೊರತುಪಡಿಸಿ) ಕಳೆದ 5 ವರ್ಷಗಳಲ್ಲಿ ನಿಗಮದಿಂದ ಯಾವುದೇ ಸಾಲ /ಸಹಾಯಧನ ಸೌಲಭ್ಯ ಪಡೆದಿರಬಾರದು.
ಅರ್ಜಿದಾರರು ನಿಗಮದ ಸುಸ್ಥಿದಾರರಾಗಿರಬಾರದು.
ಯೋಜನೆಯಡಿ ಸೀಗುವ ಸಾಲ ಸೌಲಭ್ಯದ ಮಾಹಿತಿ:
ನಿಗಮದಿಂದ ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಯೋಜನೆಯ ಅಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ 2 ಲಕ್ಷ ರೂ. ವರೆಗೆ ಸಾಲವನ್ನು ನೀಡಲಾಗುತ್ತದೆ. ಇದರಲ್ಲಿ 50% ರಷ್ಟು ಸಾಲ ಮತ್ತು 50%ರಷ್ಟು ಸಹಾಯಧನ ಆಗಿರುತ್ತದೆ. ಅಂದರೆ 1 ಲಕ್ಷ ಸಾಲ, 1 ಲಕ್ಷ ಸಹಾಯಧನ.
• ಮೊದಲಿಗೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್https://kmdconline.karnataka.gov.in/Portal/home ಗೆ ಭೇಟಿ ನೀಡಿ.
• “ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಅಡಿಯಲ್ಲಿ ವಿವಿಧ ಯೋಜನೆಗಳು (2025-26)” ವಿಭಾಗದ ಕೆಳಗೆ ನೀಡಲಾಗಿರುವ – ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ ಆಯ್ಕೆಯ ಮೇಲೆ ಟ್ಯಾಪ್ ಮಾಡಿ.
Kmdc Loan And Subsidy Scheme Online Application 2025-26
• ನಂತರ “ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ಅರ್ಜಿದಾರರ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ಮೂಲಕ ಕಳುಹಿಸಲಾಗುವ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ಹಾಗೂ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ನಂತರ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
DOM Silk Reeling and Spinning Subsidy Scheme Online Application Form 2025-26