Sindgi Urban Co-operative bank Job Notification 2025
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ದಿ ಸಿಂದಗಿ ಪಟ್ಟಣ ಸಹಕಾರಿ ಬ್ಯಾಂಕ್ನಲ್ಲಿ ಕಿರಿಯ ಸಹಾಯಕ ಹಾಗೂ ಜವಾನ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಕಿರಿಯ ಸಹಾಯಕ 06 ಹುದ್ದೆಗಳು ಹಾಗೂ ಜವಾನ 04 ಹುದ್ದೆ ಸೇರಿದಂತೆ ಒಟ್ಟು 10 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.20ರೊಳಗೆ ಸಿಂದಗಿ ಬ್ಯಾಂಕ್ ಅಧಿಕೃತ ವೆಬ್ಸೈಟ್ https://sindagiurbanbank.buffersoft.com/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 20, 2025
ಶೈಕ್ಷಣಿಕ ಅರ್ಹತೆ:
✓ ಕಿರಿಯ ಸಹಾಯಕರು (06) ಹುದ್ದೆಗೆ; ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಜೊತೆಗೆ ಪದವಿಯ ಎಲ್ಲ ವರ್ಷ/ಸೆಮಿಸ್ಟರ್ ಗಳಲ್ಲಿ ಸರಾಸರಿ ಕನಿಷ್ಟ 60% ರಷ್ಟು ಅಂಕ ಪಡೆದಿರಬೇಕು. ಸಹಕಾರ ವಿಷಯದಲ್ಲಿ ಪದವಿ/ಡಿಪ್ಲೋಮಾ ಮುಗಿಸಿದವರಿಗೆ, ಕಂಪ್ಯೂಟರ ಪರಿಜ್ಞಾನ ಹೊಂದಿದವರಿಗೆ ಹಾಗೂ ಕನಿಷ್ಟ ಮೂರು ವರ್ಷ ಬ್ಯಾಂಕಿನಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದವರಿಗೆ ಆಧ್ಯತೆ ನೀಡಲಾಗುವದು.
✓ ಜವಾನ (04) ಹುದ್ದೆಗೆ; ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ 45% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿ:
20-12-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ವಯೋಮಿತಿ ಸಡಿಲಿಕೆ; ಪ.ಜಾತಿ, ಪ.ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ – 05 ವರ್ಷಗಳು, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – 03 ವರ್ಷಗಳು.
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಲಿಖಿತ ಪರೀಕ್ಷೆ ಮೌಖಿಕ ಸಂದರ್ಶನ
ಅರ್ಜಿ ಶುಲ್ಕ:
ಕಿರಿಯ ಸಹಾಯಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ – 1000ರೂ. ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ – 500ರೂ.
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ 19,950ರೂ. ಗಳಿಂದ – 52,650ರೂ. ವರೆಗೆ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಹಂತಗಳು;
• ಸಿಂದಗಿ ಬ್ಯಾಂಕ್ ಅಧಿಕೃತ ವೆಬ್ ಸೈಟ್ https://sindagiurbanbank.buffersoft.com/ ಗೆ ಭೇಟಿ ನೀಡಿ.
• ಮುಖಪುಟದಲ್ಲಿ ನೀಡಲಾಗಿರುವ ಅರ್ಜಿ ನಮೂನೆ “ಇಲ್ಲಿ ಅನ್ವಯಿಸು” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಬಳಿಕ ನೀವು ಅರ್ಜಿ ಸಲ್ಲಿಸುವ ಹುದ್ದೆಯನ್ನು ಆಯ್ಕೆ ಮಾಡಿ ಮುಂದುವರೆಯಿರಿ.
• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ- ವಿವರಗಳನ್ನು ನಮೂದಿಸಿ. ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕದ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಿ.
• ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ಮೊಬೈಲ್ ಸಂಖ್ಯೆ 9035889855 ಅನ್ನು ಸಂಪರ್ಕಿಸಬಹುದು.