Special Incentive for Minority B.Ed Students Application 2025
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ಜನಾಂಗದ ವಿದ್ಯಾರ್ಥಿಗಳಿಗೆ 25,000 ರೂ.ವರೆಗೆ ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಡಿ.31ರೊಳಗೆ ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ(NCTE)ಯಿಂದ ಮಾನ್ಯತೆ ಪಡೆದಿರುವ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ 2025-26ನೇ ಸಾಲಿನಲ್ಲಿ ಬಿ.ಎಡ್ ಪ್ರವೇಶ ಪಡೆದು, ವ್ಯಾಸಂಗ ಮಾಡುತ್ತಿರಬೇಕು.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು:
• ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
• ವಿದ್ಯಾರ್ಥಿಯು ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಜನಾಂಗಕ್ಕೆ ಸೇರಿದವರಾಗಿರಬೇಕು.
• ವಿದ್ಯಾರ್ಥಿಯು ರಾಜ್ಯ/ಕೇಂದ್ರ ಸರ್ಕಾರಿ ನೌಕರ ಅಥವಾ ಖಾಸಗಿ ಸಂಸ್ಥೆಯಲ್ಲಿ ಪೂರ್ಣ ಸಮಯದ ಉದ್ಯೋಗಿಯಾಗಿರಬಾರದು.
• ಬಿ.ಎಡ್ ಓದುತ್ತಿರುವ ಅಭ್ಯರ್ಥಿ ಮಾತ್ರ ನಿಯಮಿತವಾಗಿ ಅರ್ಜಿ ಸಲ್ಲಿಸಲು ಅರ್ಹರು, (ಕರೆಸ್ಪಾಂಡೆನ್ಸ್/ದೂರ ಶಿಕ್ಷಣ/ಅರೆಕಾಲಿಕ B.Ed ವಿದ್ಯಾರ್ಥಿಗಳು) ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹರಲ್ಲ.
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:
• ಆಧಾರ್ ಕಾರ್ಡ್ • ವಿದ್ಯಾರ್ಥಿಗಳ ಮಾನ್ಯವಾದ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ • ಬಿ.ಎಡ್ ಪ್ರವೇಶಕ್ಕೆ ಸಂಬಂಧಿಸಿದ ಎಲ್ಲಾ ಅಧಿಕೃತ ದಾಖಲೆಗಳು • ಅಲ್ಪಸಂಖ್ಯಾತ ಪ್ರಮಾಣ ಪತ್ರ • ಆದಾಯ ಪ್ರಮಾಣ ಪತ್ರ (ಅನ್ವಯಿಸಿದರೆ) • ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ • ಇತರೆ ಅಗತ್ಯ ದಾಖಲಾತಿಗಳು
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಪ್ರೋತ್ಸಾಹಧನದ ವಿವರ
ಆಯ್ಕೆಯಾದ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ DBT ಮುಖಾಂತರ 25,000ರೂ. ವರೆಗೆ ಪ್ರೋತ್ಸಾಹಧನವನ್ನು ಜಮಾ ಮಾಡಲಾಗುತ್ತದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:
• ಮೊದಲಿಗೆ ವಿದ್ಯಾರ್ಥಿಗಳು ಸಂಪೂರ್ಣ ಪ್ರಕಟಣೆಯನ್ನು ಓದಿ ನಂತರ ಅರ್ಹತೆಗಳನ್ನು ಪೂರೈಸುತ್ತೇವೆ ಎಂದು ಖಚಿತಪಡಿಸಿಕೊಳ್ಳಬೇಕು.
• ನಂತರ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ, ನೋಂದಾಯಿಸಿ ಅಥವಾ ಮೊಬೈಲ್ ಸಂಖ್ಯೆ/ಇಮೇಲ್ ಐಡಿ ಹಾಗೂ ಓಟಿಪಿ/ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ನಂತರ “ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ(Application for Special Incentive for minority students pursuing B.Ed)” ಅರ್ಜಿ ನಮೂನೆ ಆಯ್ಕೆ ಮಾಡಿ. (ಈ ಕೆಳಗೆ ಚಿತ್ರದಲ್ಲಿ ತೋರಿಸಲಾಗಿದೆ)
Special Incentive For Minority B.ed Students Online Application 2025
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ-ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿಗಳು ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಂಡು ಮುದ್ರಣವನ್ನು ತೆಗೆದುಕೊಳ್ಳಿ.
ಹೆಚ್ಚಿನ ಮಾಹಿತಿಗಾಗಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ – 8277799990 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Important Direct Links:
Special Incentive for Minority B.Ed Students Online Application 2025 Link