ನವದೆಹಲಿ: ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ(ಸಿಎಪಿಎಫ್)ಯಲ್ಲೊಂದಾದ ಸಶಸ್ತ್ರ ಸೀಮಾ ಬಲ(ಎಸ್‌ಎಸ್‌ಬಿ)ವು ಕ್ರೀಡಾ ಕೋಟಾದಡಿ ಗ್ರೂಪ್ ‘ಸಿ’ ಕಾನ್ಸ್ಟೇಬಲ್(ಸಾಮಾನ್ಯ ಕರ್ತವ್ಯ) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 07ರವರೆಗೆ ಕಾಲಾವಕಾಶವಿದೆ. ಒಟ್ಟು 404 ಸ್ಥಾನಗಳಿಗೆ ಕ್ರೀಡಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಎಸ್‌ಎಸ್‌ಬಿ ಅಧಿಕೃತ ಜಾಲತಾಣ https://applyssb.com/SSBSports_CT_GD_26/applicationIndexಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಮೇ 09, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಜೂನ್ 07, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಜೂನ್ 07, 2026
ಶೈಕ್ಷಣಿಕ ಅರ್ಹತೆ:
SSB ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಶನ್(10ನೇ ತರಗತಿ) ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ಜೊತೆಗೆ, ಕಳೆದ 02 ವರ್ಷಗಳಲ್ಲಿ ರಾಷ್ಟ್ರೀಯ ಅಂತರರಾಷ್ಟ್ರೀಯ ಸ್ಪರ್ಧೆಗಳಲ್ಲಿ ರಾಜ್ಯ/ದೇಶವನ್ನು ಪ್ರತಿನಿಧಿಸಿರಬೇಕು ಅಥವಾ ಇತರೆ ಕ್ರೀಡಾ ಸ್ಪರ್ಧೆಗಳಲ್ಲಿ ಪದಕ ವಿಜೇತರಾಗಿರಬೇಕು ಅಥವಾ ಸ್ಪರ್ಧಿಸಿರಬೇಕು. ಅಭ್ಯರ್ಥಿಗಳು ಹೆಚ್ಚಿನ ಕ್ರೀಡಾ ಅರ್ಹತೆಯ ವಿವರಗಳಿಗಾಗಿ ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ 23 ವರ್ಷಗಳು
ಸಾಮಾನ್ಯ ಅಭ್ಯರ್ಥಿಗಳಿಗೆ 05 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 10 ವರ್ಷಗಳು, ಒಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 08 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ಕ್ರೀಡಾ ಸಾಧನೆಗಳ ಪರಿಶೀಲನೆ – ಕ್ಷೇತ್ರ ಪ್ರಯೋಗ/ಕೌಶಲ್ಯ ಪರೀಕ್ಷೆ
ದೈಹಿಕ ಗುಣಮಟ್ಟ ಪರೀಕ್ಷೆ (PST)
ವಿವರವಾದ ವೈದ್ಯಕೀಯ ಪರೀಕ್ಷೆ (DME)
ವೈದ್ಯಕೀಯ ಪರೀಕ್ಷೆಯ ಪುನರ್ವಿಮರ್ಶೆ (RME)
ಅಂತಿಮ ಆಯ್ಕೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಎಸ್‌ಎಸ್‌ಬಿ ನಿಯಮಗಳ ಅನುಸಾರ ಪ್ರತಿ ತಿಂಗಳು ₹21,700ಗಳಿಂದ ₹69,100ರವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹100/-
ಪ.ಜಾತಿ, ಪ.ಪಂಗಡ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ.?
• ಮೊದಲಿಗೆ ಅಭ್ಯರ್ಥಿಗಳು SSB ಅಧಿಕೃತ ಜಾಲತಾಣ https://applyssb.com/SSBSports_CT_GD_26/applicationIndex ಕ್ಕೆ ಭೇಟಿ ನೀಡಿ.
• ಬಳಿಕ *ಜಾಹೀರಾತು ಸಂಖ್ಯೆ: 541/RC/SSB/CT(GD)SQ-2025/2026* ವಿಭಾಗದ ಕೆಳಗೆ ನೀಡಲಾಗಿರುವ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಹೊಸ ಬಳಕೆದಾರರಾಗಿದ್ದಲ್ಲಿ, ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಗಳನ್ನು ಅಪ್ಲೋಡ್ ಮಾಡಿ.
• ಮುಂದುವರೆದಂತೆ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | ssb.gov.in |
| More Updates | Karnatakahelp.in |
Yes
Yes sir im in Karnataka police job
wish you all the best
I need gob
Super market