SSC CGL 2025 Notification: ಸಿಬ್ಬಂದಿ ಆಯ್ಕೆ ಆಯೋಗವು (SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು14,582 ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – Staff Selection Commission Examination Name – Combined Graduate Level Examination, 2025 Total Vacancy – 14,582 Apply Mode – Online Job Location – All India(Karnataka)
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 09-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 04-07-225
ಶುಲ್ಕ ಪಾವತಿಸಲು ಕೊನೆಯ ದಿನಾಂಕ – 05-07-2025
ಶೈಕ್ಷಣಿಕ ಅರ್ಹತೆ:
ಜೂನಿಯರ್ ಸ್ಟ್ಯಾಟಿಸ್ಟಿಕಲ್ ಆಫೀಸರ್ ಹುದ್ದೆಗೆ –
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 12ನೇ ತರಗತಿಯಲ್ಲಿ ಗಣಿತದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಉತ್ತೀರ್ಣ/ ಯಾವುದೇ ವಿಷಯದಲ್ಲಿ ಪದವಿ/ ಪದವಿಯಲ್ಲಿ ಸಂಖ್ಯಾಶಾಸ್ತ್ರವನ್ನು ಅಧ್ಯಯನ ಮಾಡಿದವರು.
ಸಂಖ್ಯಾಶಾಸ್ತ್ರೀಯ ತನಿಖಾಧಿಕಾರಿ ದರ್ಜೆ-1 ಹುದ್ದೆಗೆ –
ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಸಂಖ್ಯಾಶಾಸ್ತ್ರವನ್ನು ಒಂದು ವಿಷಯವಾಗಿಟ್ಟುಕೊಂಡು ಯಾವುದೇ ವಿಷಯದಲ್ಲಿ ಪದವಿ.
ಇತರೆ ಎಲ್ಲಾ ಹುದ್ದೆಗಳಿಗೆ –
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ದಿನಾಂಕ 1-08-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 32 ವರ್ಷಗಳು
ಮೀಸಲಾತಿ ವರ್ಗಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಶ್ರೇಣಿ-1 ಪರೀಕ್ಷೆ
ಶ್ರೇಣಿ – 2 ಪರೀಕ್ಷೆ
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
SC/ST/PH/ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು SSCಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಆನ್‌ಲೈನ್ ಮೂಲಕ SSCಯ ಅಧಿಕೃತ ವೆಬ್‌ಸೈಟ್ https://ssc.gov.in/candidate-portal/one-time-registration/home-page ಗೆ ಭೇಟಿ ನೀಡಿ.
ಇ-ಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ. ಅಥವಾ ನೋಂದಾಯಿಸಿ.
ನಂತರ ಸಂಯೋಜಿತ ಪದವಿ ಹಂತದ ಪರೀಕ್ಷೆಯ ಸೂಚನೆ, 2025 ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿ ಮಾಡಿ.(ಅನ್ವಯಿಸಿದರೆ)
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.