ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸಿಬ್ಬಂದಿ ಆಯ್ಕೆ ಆಯೋಗವು ಅಧಿಸೂಚನೆ ಬಿಡುಗಡೆ ಮಾಡಿ, ಅರ್ಜಿ ಸಲ್ಲಿಕೆ ಪ್ರಾರಂಭಿಸಿದೆ.
ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 3131 SSC ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಲೋವರ್ ಡಿವಿಷನ್ ಕ್ಲರ್ಕ್/ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ ಹಾಗೂ ಅಂಚೆ ಸಹಾಯಕ / ವಿಂಗಡಣೆ ಸಹಾಯಕ ಹುದ್ದೆಗೆ – ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ಸಂಸ್ಥೆಯಿಂದ 10+2 ಲೆವೆಲ್ (ಹೈಯರ್ ಸೆಕೆಂಡರಿ ಲೆವೆಲ್)[12th Pass] ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಟೈಪಿಂಗ್(ಇಂಗ್ಲಿಷ್: 35 WPM, ಹಿಂದಿ: 30 WPM).
ಡೇಟಾ ಎಂಟ್ರಿ ಆಪರೇಟರ್ (DEO) ಹುದ್ದೆಗೆ – ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ಸಂಸ್ಥೆಯಿಂದ ವಿಜ್ಞಾನ ವಿಭಾಗದಲ್ಲಿ ಗಣಿತವನ್ನು ಒಂದು ವಿಷಯವಾಗಿಟ್ಟುಕೊಂಡು12ನೇ ತರಗತಿ(2nd PUC)ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ದಿನಾಂಕ 1-08-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 27 ವರ್ಷಗಳು
ಮೀಸಲಾತಿ ವರ್ಗಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ಪ್ರಕ್ರಿಯೆ:
ಶ್ರೇಣಿ-1 ಪರೀಕ್ಷೆ
ಶ್ರೇಣಿ – 2 ಪರೀಕ್ಷೆ
ಕೌಶಲ್ಯ ಪರೀಕ್ಷೆ/ಟೈಪಿಂಗ್ ಪರೀಕ್ಷೆ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 100 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ, ಪಿಡಬ್ಲ್ಯೂಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ಇರುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು SSCಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
ಆನ್‌ಲೈನ್ ಮೂಲಕ SSCಯ ಅಧಿಕೃತ ವೆಬ್‌ಸೈಟ್ https://ssc.gov.in/ ಗೆ ಭೇಟಿ ನೀಡಿ.
ಇ-ಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ. ಅಥವಾ ನೋಂದಾಯಿಸಿ.
ನಂತರ SSC ಕಂಬೈನ್ಡ್ ಹೈಯರ್ ಸೆಕೆಂಡರಿ ಲೆವೆಲ್ (CHSL) ಹುದ್ದೆಗಳ ನೇಮಕಾತಿ 2025 ಅರ್ಜಿಯನ್ನು ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿ ಮಾಡಿ.(ಅನ್ವಯಿಸಿದರೆ)
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.