ದೆಹಲಿ ಪೊಲೀಸ್ನಲ್ಲಿ ಕಾನ್ಸ್ಟೆಬಲ್(ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು ಸೆ.22ರಂದು ಅಧಿಸೂಚನೆ ಹೊರಡಿಸಿದೆ.
ಒಟ್ಟು 7565 ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/ನ ಮೂಲಕ ಅ.21ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಸೆಪ್ಟೆಂಬರ್ 22, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಅಕ್ಟೋಬರ್ 21, 2025
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಅಕ್ಟೋಬರ್ 22, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು. ಶೈಕ್ಷಣಿಕ ಅರ್ಹತೆಯ ಜೊತೆಗೆ, ಪುರುಷ ಅಭ್ಯರ್ಥಿಯು ಮಾನ್ಯವಾದ ಲಘು ಮೋಟಾರು ವಾಹನ (LMV) ಚಾಲನಾ ಪರವಾನಗಿಯನ್ನು ಹೊಂದಿರಬೇಕು.
ಹುದ್ದೆಗೆ ಅರ್ಹರೆಂದು ಪರಿಗಣಿಸಲು ಶೈಕ್ಷಣಿಕ ಅರ್ಹತೆ ಮತ್ತು ಚಾಲನಾ ಪರವಾನಗಿ ಎರಡೂ ಷರತ್ತುಗಳು ಕಡ್ಡಾಯವಾಗಿದೆ.
ಮಾಸಿಕ 21,700ರೂ.ಗಳಿಂದ 69,100ರೂ.ವರೆಗೆ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 100ರೂ.
ಪ.ಜಾತಿ, ಪ.ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕವಿರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ
SSC ಅಧಿಕೃತ ವೆಬ್ ಸೈಟ್ https://ssc.gov.in/ ಗೆ ಭೇಟಿ ನೀಡಿ.
ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
ಲಾಗಿನ್ ಆದ ನಂತರ “ದೆಹಲಿ ಪೊಲೀಸ್ ಪರೀಕ್ಷೆಯಲ್ಲಿ ಕಾನ್ಸ್ಟೆಬಲ್(ಕಾರ್ಯನಿರ್ವಾಹಕ) ಪುರುಷ ಮತ್ತು ಮಹಿಳೆ, ನೇಮಕಾತಿ-2025” ಜಾಹೀರಾತನ್ನು ವೀಕ್ಷಿಸಿ ಅನ್ವಯಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
ಅಂತಿಮವಾಗಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.