ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ದೆಹಲಿ ಪೊಲೀಸ್ ಇಲಾಖೆಯ ಸಬ್ ಇನ್‌ಸ್ಪೆಕ್ಟರ್ ಮತ್ತು CAPF ಗಳಲ್ಲಿ ಸಬ್ ಇನ್‌ಸ್ಪೆಕ್ಟರ್ ಹುದ್ದೆಗೆ SSC CPO ಪರೀಕ್ಷೆಯನ್ನು 27, 28 ಮತ್ತು 29th ಜೂನ್ 2024 ರಂದು ನಡೆಸಲಾಗುತ್ತಿದ್ದು. ಈ ಪರೀಕ್ಷೆಗೆ ಸಂಬಂಧಿಸಿದ ಕೇರಳ ಮತ್ತು ಕರ್ನಾಟಕ ಪ್ರದೇಶದ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈಗ ತಮ್ಮ ಅರ್ಜಿ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಬಿಡುಗಡೆಯಾಗಿದೆ. ಅಭ್ಯರ್ಥಿಗಳು ತಮ್ಮ ಪ್ರವೇಶ ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಲು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಲಾಗಿನ್ ಮಾಡುವ ಮೂಲಕ ಪ್ರವೇಶ ಪತ್ರವನ್ನು ಆನ್ ಲೈನ್ ನಲ್ಲಿ ಡೌನ್ಲೋಡ್ ಮಾಡಬಹುದು.
ಈ ಪರೀಕ್ಷೆಯನ್ನು SSC CPO 2024 ದೆಹಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4187 ಹುದ್ದೆಗಳ ನೇಮಕಾತಿಗೆ ಈ ಪರೀಕ್ಷೆಯನ್ನು ನಡೆಸಲಾಗುತ್ತಿದೆ.ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಎಲ್ಲಾ ದೇಶದ ಎಲ್ಲಾ ಪ್ರದೇಶಗಳಿಗೆ SSC CPO ಪ್ರವೇಶ ಕಾರ್ಡ್ SSCಯು ಪ್ರಾದೇಶಿಕ ಅಧಿಕೃತ ವೆಬ್‌ಸೈಟ್‌ಗಳಿಗೆ ಅಪ್‌ಲೋಡ್ ಮಾಡಲಾಗುತ್ತದೆ. SSC CPO 2024 ಪರೀಕ್ಷೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು SSC ನ ತಮ್ಮ ಪ್ರಾದೇಶಿಕ ವೆಬ್‌ಸೈಟ್ https://ssc.gov.in ಭೇಟಿ ನೀಡುವ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ.