SSC JE 2025: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ

ಸಿಬ್ಬಂದಿ ಆಯ್ಕೆ ಆಯೋಗವು ಜೂನಿಯರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್) ಪರೀಕ್ಷೆ, 2025ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

By Shwetha Chidambar

Published On:

IST

ಫಾಲೋ ಮಾಡಿ

SSC JE 2025 Notification
SSC JE Notification 2025

ಒಟ್ಟು 1340 ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಗಾಗಿ ಸಿಬ್ಬಂದಿ ಆಯ್ಕೆ ಆಯೋಗವು (SSC)ವು ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೇಂದ್ರ ಸರ್ಕಾರದ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಜೂನಿಯರ್ ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟಿಕಲ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ ನ ಅಧಿಕೃತ ವೆಬ್ ಸೈಟ್ https://ssc.gov.in/ ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಆರಂಭ ದಿನಾಂಕ – 30-06-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 21-07-2025

ಶೈಕ್ಷಣಿಕ ಅರ್ಹತೆ:

SSC ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಸಂಬಂಧಿತ ವಿಷಯಗಳಲ್ಲಿ ಇಂಜಿನಿಯರಿಂಗ್ ಪದವಿ(Degree in Engineering) ಪೂರ್ಣಗೊಳಿಸಿರಬೇಕು.

ಅಥವಾ

ಇಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಮೂರು ವರ್ಷಗಳ ಡಿಪ್ಲೊಮಾ(Diploma in Engineering) ಪೂರ್ಣಗೊಳಿಸಿರಬೇಕು.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ – 27 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 32 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಆಯ್ಕೆ ಪ್ರಕ್ರಿಯೆ:

  • ಶ್ರೇಣಿ-I ಪರೀಕ್ಷೆ
  • ಶ್ರೇಣಿ-II ಪರೀಕ್ಷೆ
  • ದಾಖಲೆ ಪರಿಶೀಲನೆ
  • ಅರ್ಹತೆ ಪಟ್ಟಿ

ಅರ್ಜಿ ಶುಲ್ಕ:

  • ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ – 100 ರೂ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪಿಡಬ್ಲ್ಯೂಡಿ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

How to Apply For SSC JE 2025 Notification?

ಅರ್ಜಿ ಸಲ್ಲಿಸುವ ವಿಧಾನ;

  • ಅಭ್ಯರ್ಥಿಗಳು SSCಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
  • ಆನ್‌ಲೈನ್ ಮೂಲಕ SSCಯ ಅಧಿಕೃತ ವೆಬ್‌ಸೈಟ್‌ https://ssc.gov.in/home/apply ಗೆ ಭೇಟಿ ನೀಡಿ.
  • ಅನ್ವಯಿಸು ವಿಭಾಗದಲ್ಲಿ ಜೂನಿಯ‌ರ್ ಎಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್ ಮತ್ತು ಎಲೆಕ್ಟಿಕಲ್) ಪರೀಕ್ಷೆ, 2025 ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ. ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
  • ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
  • ಅರ್ಜಿ ಶುಲ್ಕ ಪಾವತಿ ಮಾಡಿ.(ಅನ್ವಯಿಸಿದರೆ)
  • ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitessc.gov.in
More UpdatesKarnataka Help.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “SSC JE 2025: ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ, ಅಪ್ಲೈ ಮಾಡಿ”

Leave a Comment