SSC JHT 2026: ಎಸ್‌ಎಸ್‌ಸಿ ಹಿಂದಿ ಅನುವಾದಕ ಹುದ್ದೆಗಳ ನೇಮಕಾತಿ

Published on:

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ(ಎಸ್‌ಎಸ್‌ಸಿ)ವು 2026ನೇ ಸಾಲಿನ ಸಂಯೋಜಿತ ಹಿಂದಿ ಅನುವಾದಕರ ಪರೀಕ್ಷೆಯ ಮೂಲಕ ಗ್ರೂಪ್ ‘ಬಿ’ ನಾನ್ ಗೆಜೆಟೆಡ್ ಹಿಂದಿ ಅನುವಾದಕ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಿ, ಅರ್ಜಿ ಆಹ್ವಾನಿಸಿದೆ.

ಜೂನಿಯರ್ ಹಿಂದಿ ಅನುವಾದಕ, ಜೂನಿಯರ್ ಅನುವಾದ ಅಧಿಕಾರಿ, ಜೂನಿಯರ್ ಅನುವಾದಕ, ಹಿರಿಯ ಹಿಂದಿ ಅನುವಾದಕ ಮತ್ತು ಹಿರಿಯ ಅನುವಾದ ಅಧಿಕಾರಿ ಸೇರಿದಂತೆ ಒಟ್ಟು 84 ಹುದ್ದೆಗಳ ನೇಮಕ ನಡೆಯಲಿದೆ. ಅರ್ಜಿ ಸಲ್ಲಿಸಲು ಮೇ 14 ಕೊನೆಯದಿನವಾಗಿದೆ. ಹಿಂದಿ/ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಜೊತೆಗೆ ನಿಗದಿತ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಅರ್ಜಿದಾರರು ಎಸ್‌ಎಸ್‌ಸಿ ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 23, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 14, 2026
  • ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ – ಮೇ 15, 2026
  • ಕಂಪ್ಯೂಟರ್ ಆಧಾರಿತ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ – ಆಗಸ್ಟ್ – ಸೆಪ್ಟೆಂಬರ್ 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹಿಂದಿ/ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು ಮತ್ತು ಹಿಂದಿಯಿಂದ ಇಂಗ್ಲಿಷ್‌ಗೆ ಅನುವಾದದಲ್ಲಿ ಡಿಪ್ಲೊಮಾ/ ಪ್ರಮಾಣಪತ್ರದ ಕೋರ್ಸ್ ಜೊತೆಗೆ ಹಿಂದಿಯಿಂದ ಇಂಗ್ಲಿಷ್‌ಗೆ ಅನುವಾದ ಕಾರ್ಯದಲ್ಲಿ 02/03 ವರ್ಷಗಳ ವೃತ್ತಿ ಅನುಭವವನ್ನು ಹೊಂದಿರಬೇಕು.

ವಯೋಮಿತಿ:

01-08-2026 ರಂತೆ;

ಕನಿಷ್ಠ 18 ವರ್ಷಗಳು, ಗರಿಷ್ಠ 30 ವರ್ಷಗಳು

ಒಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಬಿಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಬಿಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ:

ಪತ್ರಿಕೆ- I ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
ಪತ್ರಿಕೆ-II ವಿವರಣಾತ್ಮಕ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ

ಸಂಬಳ:

ಜೂನಿಯರ್ ಅನುವಾದ ಅಧಿಕಾರಿ, ಜೂನಿಯರ್ ಅನುವಾದಕ ಹಾಗೂ ಜೂನಿಯರ್ ಹಿಂದಿ ಅನುವಾದಕ ಹುದ್ದೆಗಳಿಗೆ ₹35,400-₹1,12,400

ಹಿರಿಯ ಹಿಂದಿ ಅನುವಾದಕ, ಹಿರಿಯ ಅನುವಾದಕ ಹಾಗೂ ಹಿರಿಯ ಅನುವಾದ ಅಧಿಕಾರಿ ಹುದ್ದೆಗಳಿಗೆ ₹44,900-₹1,42,400

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ ₹100
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ…

• ಮೊದಲಿಗೆ ಅಭ್ಯರ್ಥಿಗಳು SSC ಅಧಿಕೃತ ಜಾಲತಾಣ https://ssc.gov.in/ ಕ್ಕೆ ಭೇಟಿ ನೀಡಿ.

• ಬಳಿಕ “ತ್ವರಿತ ಲಿಂಕ್ ಗಳು” ಶೀರ್ಷಿಕೆಯ ಕೆಳಗೆ ನೀಡಲಾಗಿರುವ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ “ಸಂಯೋಜಿತ ಹಿಂದಿ ಅನುವಾದಕರ ಪರೀಕ್ಷೆ, 2026” ಅನ್ವಯಿಸು ಆಯ್ಕೆಯನ್ನು ಆರಿಸಿ.

• ಮುಂದುವರೆದಂತೆ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websitehttps://ssc.gov.in/
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment