SSC JHT Notification 2025: ಜೂ. ಹಿಂದಿ ಅನುವಾದಕ ಹುದ್ದೆಗಳ ನೇಮಕಾತಿ, ಅರ್ಜಿ ಆಹ್ವಾನ
ಎಸ್‌ಎಸ್‌ಸಿಯು ಕಿರಿಯ ಹಿಂದಿ ಅನುವಾದಕ, ಕಿರಿಯ ಅನುವಾದ ಅಧಿಕಾರಿ, ಕಿರಿಯ ಅನುವಾದಕ, ಹಿರಿಯ ಹಿಂದಿ ಅನುವಾದಕ, ಹಿರಿಯ ಅನುವಾದಕ ಮತ್ತು ಸಬ್-ಇನ್ಸ್‌ಪೆಕ್ಟರ್ (ಹಿಂದಿ ಅನುವಾದಕ) ಹುದ್ದೆಗಳಿಗೆ ನೇಮಕಾತಿ
SSC JHT Notification 2025: ಸಿಬ್ಬಂದಿ ಆಯ್ಕೆ ಆಯೋಗವು ಹಿಂದಿ ಅನುವಾದಕರ (JHT) ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸಿಬ್ಬಂದಿ ನೇಮಕಾತಿ ಆಯೋಗ (SSC) ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, SSC 437 ಹಿಂದಿ ಅನುವಾದಕರ (JHT) ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಆಸಕ್ತ ಮತ್ತು ಅರ್ಥ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.in/candidate-portal/one-time-registration/home-page ಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.