ಸಿಬ್ಬಂದಿ ಆಯ್ಕೆ ಆಯೋಗವು 2026ನೇ ಸಾಲಿನಲ್ಲಿ ನಡೆಸಲಿರುವ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ವೇಳಾಪಟ್ಟಿಯನ್ನು ಶನಿವಾರ ಬಿಡುಗಡೆಗೊಳಿಸಿದೆ.
ಬಹು-ಕಾರ್ಯ ಸಿಬ್ಬಂದಿ ಮತ್ತು ಹವಾಲ್ದಾರ್ ಹುದ್ದೆಗಳಿಗೆ ಸಂಬಂಧಿಸಿದ ಪರೀಕ್ಷೆಯು ಫೆ.04 ರಂದು ಹಾಗೂ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ(CAPFs), ಎಸ್ಎಸ್ಎಫ್ನಲ್ಲಿನ ಕಾನ್ಸ್ಟೇಬಲ್(GD) ಮತ್ತು ಅಸ್ಸಾಂ ರೈಫಲ್ಸ್ನಲ್ಲಿನ ರೈಫಲ್ಮನ್ =(GD) ಹುದ್ದೆಗಳ ಭರ್ತಿಗಾಗಿ ಫೆ.23ರಂದು ಪರೀಕ್ಷೆ ನಡೆಯಲಿವೆ ಎಂದು ಆಯೋಗ ಹೊರಡಿಸಿದ ಪ್ರಕಟಣೆ ತಿಳಿಸಿದೆ.
ಸದರಿ ಪರೀಕ್ಷೆಗಳ ವೇಳಾಪಟ್ಟಿಯನ್ನು SSC ಅಧಿಕೃತ ವೆಬ್ಸೈಟ್ https://ssc.gov.in/ನಲ್ಲಿ ಬಿಡುಗಡೆಯಾಗಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ವೇಳಾಪಟ್ಟಿಯನ್ನು ಪರಿಶೀಲಿಸಬಹುದು.
2026ರಲ್ಲಿ ನಡೆಯಲಿರುವ ಪರೀಕ್ಷೆಗಳ ವೇಳಾಪಟ್ಟಿ
• 2026ರ ಫೆಬ್ರವರಿ 4 ರಿಂದ – ಬಹು-ಕಾರ್ಯ (ತಾಂತ್ರಿಕೇತರ) ಸಿಬ್ಬಂದಿ ಮತ್ತು ಹವಾಲ್ದಾರ್ (CBIC & CBN) ಪರೀಕ್ಷೆಗಳನ್ನು ನಡೆಸಲಾಗುತ್ತದೆ.
• 2026ರ ಫೆಬ್ರವರಿ 23 ರಿಂದ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್ಸ್ಟೇಬಲ್ (GD) ಹಾಗೂ SSF, ಮತ್ತು ಅಸ್ಸಾಂ ರೈಫಲ್ಸ್ ಪರೀಕ್ಷೆಯಲ್ಲಿ ರೈಫಲ್ಮನ್ (GD) ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ವೇಳಾಪಟ್ಟಿ ಡೌನ್ಲೋಡ್ ಮಾಡುವ ವಿಧಾನ:
• ಮೊದಲಿಗೆ ಅಭ್ಯರ್ಥಿಗಳು ಎಸ್.ಎಸ್.ಸಿ ಅಧಿಕೃತ ಜಾಲತಾಣ https://ssc.gov.in/ ಕ್ಕೆ ಭೇಟಿ ನೀಡಿ.
• ನಂತರ ಸೂಚನಾ ಫಲಕ ವಿಭಾಗದ ಕೆಳಗೆ ನೀಡಲಾಗಿರುವ “ಪ್ರಮುಖ ಸೂಚನೆ- ಪರೀಕ್ಷೆಯ ವೇಳಾಪಟ್ಟಿ (536.45 ಕೆಬಿ)” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ 2026ನೇ ಸಾಲಿನಲ್ಲಿ ನಡೆಯಲಿರುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿಯ ಪಿಡಿಎಫ್ ತೆರೆಯುತ್ತದೆ.
• ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಪರೀಕ್ಷಾ ದಿನಾಂಕಗಳನ್ನು ಪರಿಶೀಲಿಸಿ.