ಸಿಬ್ಬಂದಿ ಆಯ್ಕೆ ಆಯೋಗವು ಆಯ್ಕೆ ಹಂತ-XIVರಡಿ ವಿವಿಧ ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಈಗಾಗಲೇ ಪ್ರಾರಂಭವಾಗಿದೆ.
ಸ್ಟೆನೋಗ್ರಾಫರ್, ಲ್ಯಾಬೋರೇಟರಿ ಅಟೆಂಡೆಂಟ್, ಜೂನಿಯರ್ ಎಂಜಿನಿಯರ್, ಸೈಂಟಿಫಿಕ್ ಅಸಿಸ್ಟೆಂಟ್, ಅಕೌಂಟೆಂಟ್ ಹಾಗೂ ಮೆಕಾನಿಕ್ ಸೇರಿದಂತೆ ಇತರೆ ಒಟ್ಟು 3003 ಸ್ಥಾನಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಮೇ 04 ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು SSC ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 13, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 04, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮೇ 05, 2026
ವರ್ಗಗಳವಾರು ಖಾಲಿ ಇರುವ ಹುದ್ದೆಗಳ ವಿವರ:
ಪರಿಶಿಷ್ಟ ಜಾತಿಗೆ 346 ಹುದ್ದೆಗಳು
ಪರಿಶಿಷ್ಟ ಪಂಗಡಕ್ಕೆ 185 ಹುದ್ದೆಗಳು
ಒಬಿಸಿಗೆ 667 ಹುದ್ದೆಗಳು
ಸಾಮಾನ್ಯ ವರ್ಗಕ್ಕೆ 1534 ಹುದ್ದೆಗಳು
ಇಡಬ್ಲ್ಯೂಎಸ್ ವರ್ಗಕ್ಕೆ 271 ಹುದ್ದೆಗಳು
ಒಟ್ಟು – 3003 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
SSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಪದವಿ ಹಾಗೂ ಇತರೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ:
ಕನಿಷ್ಠ ಮಿತಿ 18 ವರ್ಷಗಳು
ಗರಿಷ್ಠ ಮಿತಿ 35 ವರ್ಷಗಳು
(ಹುದ್ದೆಗಳಿಗೆ ಅನುಗುಣವಾಗಿ ವಯಸ್ಸಿನ ಮಿತಿ ಬದಲಾಗುತ್ತದೆ ಆದ್ದರಿಂದ ಅಭ್ಯರ್ಥಿಗಳು ತಪ್ಪದೆ ಅಧಿಕೃತ ಅಧಿಸೂಚನೆಯನ್ನು ಓದಬೇಕು)
ವಯೋಮಿತಿ ಸಡಿಲಿಕೆ; ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷಗಳು, ಪಿಡಬ್ಲ್ಯೂಡಿ ಸಾಮಾನ್ಯ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಡಿ ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳು.
ಆಯ್ಕೆ ಪ್ರಕ್ರಿಯೆ
- ಕಂಪ್ಯೂಟರ್ ಆಧಾರಿತ ಪರೀಕ್ಷೆ
- ಕೌಶಲ್ಯ ಪರೀಕ್ಷೆ
- ದಾಖಲೆ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಸಂಬಳ:
ಸಿಬ್ಬಂದಿ ಆಯ್ಕೆ ಆಯೋಗದ ನಿಯಮಗಳ ಅನುಸಾರ ಹುದ್ದೆಗಳಿಗೆ ಅನುಗುಣವಾಗಿ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ₹100
ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು SSC ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ.
• ಬಳಿಕ ತ್ವರಿತ ಲಿಂಕ್ ಗಳು ವಿಭಾಗದ ಕೆಳಗೆ ನೀಡಲಾಗಿರುವ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಹೊಸ ಬಳಕೆದಾರರಾಗಿದ್ದಲ್ಲಿ, ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಗಳನ್ನು ಅಪ್ಲೋಡ್ ಮಾಡಿ.
• ಇದಾದ ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | ssc.gov.in |
| More Updates | KarnatakaHelp.in |
Akash
R
Kurani