SSC Stenographer 2024 Notification: ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) ಇತ್ತೀಚೆಗೆ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಇಂದು ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯಲ್ಲಿ ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು SSC ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು CBE ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
Organization Name – Staff Selection Commission Post Name – Stenographer Total Vacancy – 2006 Application Process: Online Job Location – All India(Karnataka)
ಪ್ರಮುಖ ದಿನಾಂಕಗಳು:
ಅಧಿಸೂಚನೆ ಪ್ರಕಟಣೆ: ಜುಲೈ 26, 2024
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಜುಲೈ 26, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 17, 2024
ಪರೀಕ್ಷೆಯ ನಿರೀಕ್ಷಿತ ದಿನಾಂಕ: ಅಕ್ಟೋಬರ್-ನವೆಂಬರ್ 2024
ಅರ್ಹತೆ:
ಶೈಕ್ಷಣಿಕ ಅರ್ಹತೆ: 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ಟೈಪಿಂಗ್ ಕೌಶಲ್ಯ ಇರಬೇಕು
ವಯೋಮಿತಿ:
ಗ್ರೇಡ್ – ಸಿ ಹುದ್ದೆಗಳಗೆ – ಕನಿಷ್ಠ 18 ರಿಂದ ಗರಿಷ್ಠ 30 ವರ್ಷ
ಗ್ರೇಡ್ – ಡಿ ಹುದ್ದೆಗಳಗೆ – ಕನಿಷ್ಠ 18 ರಿಂದ ಗರಿಷ್ಠ 27 ವರ್ಷ
ವೇತನ ವಿವರ:
SSC Stenographer Grade C- ₹9,300 to ₹ 34,800
SSC Stenographer Grade D- ₹5,200 to ₹20,200
ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಈ ಕೆಳಗೆ ತಿಳಿಸಿದಂತೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಆನ್ ಲೈನ್ ಲಿಖಿತ ಪರೀಕ್ಷೆ
ಟೈಪಿಂಗ್ ಟೆಸ್ಟ್
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರಿಶೀಲನೆ
ಪರೀಕ್ಷೆಯ ಮಾದರಿ:
ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿರುತ್ತದೆ. ಪರೀಕ್ಷೆಯಲ್ಲಿ ಸಾಮಾನ್ಯ ಜ್ಞಾನ, ತಾರ್ಕಿಕ ಕೌಶಲ್ಯ ಮತ್ತು ಇಂಗ್ಲಿಷ್ ಭಾಷೆ ಸೇರಿದಂತೆ ವಿವಿಧ ವಿಷಯಗಳಿಂದ ಪ್ರಶ್ನೆಗಳು ಕೇಳಲಾಗುತ್ತದೆ.