SSC ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪಿಯುಸಿ ಅರ್ಹತೆ | ಅರ್ಜಿ ಸಲ್ಲಿಸಲು ಮೇ 15ರ ಗಡುವು

Published on:

ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗವು 2026ನೇ ಸಾಲಿನ ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಸದರಿ ಪರೀಕ್ಷೆಯಲ್ಲಿ ಒಟ್ಟು 731 ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಿಕೊಳ್ಳಲಿದೆ. 12ನೇ ತರಗತಿ ಉತ್ತೀರ್ಣರಾದ ಉದ್ಯೋಗಾಕಾಂಕ್ಷಿಗಳು ಎಸ್‌ಎಸ್‌ಸಿ ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ ಮೇ 15ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಏಪ್ರಿಲ್ 24, 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮೇ 15, 2026
  • ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ – ಮೇ 16, 2026
  • ಕಂಪ್ಯೂಟರ್ ಆಧಾರಿತ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ – ಜುಲೈ – ಆಗಸ್ಟ್ 2026

ಶೈಕ್ಷಣಿಕ ಅರ್ಹತೆ:

ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ದ್ವಿತೀಯ ಪಿಯುಸಿ (12ನೇ ತರಗತಿ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

01-08-2026ರಂತೆ;

✓ ಸ್ಟೆನೋಗ್ರಾಫರ್ ಗ್ರೇಡ್ “ಸಿ” ಹುದ್ದೆಗಳಿಗೆ; ಕನಿಷ್ಠ 18 ವರ್ಷಗಳು, ಗರಿಷ್ಠ 30 ವರ್ಷಗಳು.

✓ ಸ್ಟೆನೋಗ್ರಾಫರ್ ಗ್ರೇಡ್ ‘ಡಿ’ ಹುದ್ದೆಗಳಿಗೆ; ಕನಿಷ್ಠ 18 ವರ್ಷಗಳು, ಗರಿಷ್ಠ 27 ವರ್ಷಗಳು.

ಒಬಿಸಿ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳಿಗೆ 03 ವರ್ಷಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷಗಳು, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳು, ಪಿಡಬ್ಲ್ಯೂಬಿಡಿ ಒಬಿಸಿ ಅಭ್ಯರ್ಥಿಗಳಿಗೆ 13 ವರ್ಷಗಳು, ಪಿಡಬ್ಲ್ಯೂಬಿಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 15 ವರ್ಷಗಳವರೆಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಆಯ್ಕೆ ವಿಧಾನ:

• ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)
• ಕೌಶಲ್ಯ ಪರೀಕ್ಷೆ
• ದಾಖಲೆ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ಸಂಬಳ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಅನ್ವಯ ಅವರ ಹುದ್ದೆಗಳಿಗೆ ಅನುಗುಣವಾಗಿ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಸಾಮಾನ್ಯ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – ₹100
ಪ.ಜಾತಿ, ಪ.ಪಂಗಡ, ಮಾಜಿ ಸೈನಿಕ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಕೆ ಹೇಗೆ..?

• SSC ಅಧಿಕೃತ ಜಾಲತಾಣ https://ssc.gov.in/ಕ್ಕೆ ಭೇಟಿ ನೀಡಿ.

• ಬಳಿಕ “ತ್ವರಿತ ಲಿಂಕ್ ಗಳು” ಶೀರ್ಷಿಕೆಯ ಕೆಳಗೆ ನೀಡಲಾಗಿರುವ *ಅನ್ವಯಿಸು* ಲಿಂಕ್ ಮೇಲೆ ಕ್ಲಿಕ್ ಮಾಡಿ “ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ’ ಪರೀಕ್ಷೆ, 2026,2026” ಅನ್ವಯಿಸು ಆಯ್ಕೆಯನ್ನು ಆರಿಸಿ.

• ಮುಂದುವರೆದಂತೆ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.

• ನಂತರ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಸಹಿ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.

• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ.

Important Direct Links:

Official Notification PDFDownload
Online Application Form LinkApply Now
Official Websitessc.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “SSC ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ”

Leave a Comment