SSC Stenographer Notification 2025: ಸಿಬ್ಬಂದಿ ಆಯ್ಕೆ ಆಯೋಗವು ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಒಟ್ಟು 261 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದ್ದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಆಯೋಗವು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುತ್ತದೆ. ಅದರಂತೆ, ಸ್ಟಾಫ್ ಸೆಲೆಕ್ಷನ್ ಕಮಿಷನ್ ಶೀಘ್ರಲಿಪಿಗಾರ ಗ್ರೇಡ್ ಸಿ ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಡಿ
ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಆಸಕ್ತ ಮತ್ತು ಅರ್ಥ ಅಭ್ಯರ್ಥಿಗಳು SSC ಅಧಿಕೃತ ವೆಬ್ ಸೈಟ್ https://ssc.gov.inಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Highlights of Employment News
Organization Name – Staff Selection Commission
Post Name – Stenographer
Total Vacancy – 261
Apply Mode – Online
Job Location – All India(Karnataka)
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ – 06-06-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 26-06-225
- ಶುಲ್ಕ ಪಾವತಿಸಲು ಕೊನೆಯ ದಿನಾಂಕ – 27-06-2025
- ಕಂಪ್ಯೂಟರ್ ಆಧಾರಿತ ಪರೀಕ್ಷೆಯ ವೇಳಾಪಟ್ಟಿ – 06-08-2025 ರಿಂದ 11-08-2025 ರವರೆಗೆ ನಡೆಸಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. (ಕಟ್-ಆಫ್ ದಿನಾಂಕ 01.08.2025 ರಂತೆ ಅಥವಾ ಅದಕ್ಕೂ ಮೊದಲು)
ವಯೋಮಿತಿ:
ಶೀಘ್ರಲಿಪಿಗಾರ ಗ್ರೇಡ್ ಸಿ ಹುದ್ದೆಗೆ –
- ದಿನಾಂಕ 01-08-2025 ರಂತೆ ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಸ್ಟೆನೋಗ್ರಾಫರ್ ಗ್ರೇಡ್ ಡಿ ಹುದ್ದೆಗೆ –
- ದಿನಾಂಕ 01-08-2025 ರಂತೆ ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ – 27 ವರ್ಷಗಳು
ಆಯ್ಕೆ ಪ್ರಕ್ರಿಯೆ:
- ಆನ್ಲೈನ್ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ – CBT)
- ಕೌಶಲ್ಯ ಪರೀಕ್ಷೆ
- ದಾಖಲಾತಿ ಪರಿಶೀಲನೆ
ಅರ್ಜಿ ಶುಲ್ಕ:
- ಎಲ್ಲಾ ಅಭ್ಯರ್ಥಿಗಳಿಗೆ – 100 ರೂ.
- ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪಿಡಬ್ಲ್ಯೂಬಿಡಿ/ ಮಾಜಿ ಸೈನಿಕ / ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು SSCಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ.
- SSCಯ ಅಧಿಕೃತ ವೆಬ್‌ಸೈಟ್ https://ssc.gov.in/candidate-portal/one-time-registration/home-page ಗೆ ಭೇಟಿ ನೀಡಿ.
- ಇ-ಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ. ಅಥವಾ ನೋಂದಾಯಿಸಿ.
- ಅರ್ಜಿ ಸಲ್ಲಿಸುವಾಗ ಎಲ್ಲಾ ಅಗತ್ಯ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಿ.
- ಸ್ಟೆನೋಗ್ರಾಫರ್ ಗ್ರೇಡ್ ‘ಸಿ’ ಮತ್ತು ‘ಡಿ ಪರೀಕ್ಷೆಗೆ ನೋಂದಾಯಿಸಿ.
- ಅರ್ಜಿಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
- ಅರ್ಜಿ ಶುಲ್ಕ ಪಾವತಿ ಮಾಡಿ. (ಅನ್ವಯಿಸಿದರೆ)
- ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಲ್ಲಿಸಿದ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
Online Application Form Link | Apply Now |
Official Website | ssc.gov.in |
More Updates | Karnataka Help.in |