SSLC ಪರೀಕ್ಷೆ 2026ರ ಅಂತಿಮ ವೇಳಾಪಟ್ಟಿ ಪ್ರಕಟ

Published on:

ಫಾಲೋ ಮಾಡಿ
SSLC Exam 1 and Exam 2 Final Time Table 2026
SSLC Exam 1 and Exam 2 Final Time Table 2026

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಹಾಗೂ ಪರೀಕ್ಷೆ-2ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2026ರ ಮಾರ್ಚ್ 18ರಿಂದ ಏಪ್ರಿಲ್ 02 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ – 1 ಹಾಗೂ ಮೇ 18 ರಿಂದ ಮೇ 25 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ-2 ಅನ್ನು ರಾಜ್ಯದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ನಡೆಸಲು ನಿರ್ಧರಿಸಲಾಗಿದ್ದು, ಸದರಿ ಪರೀಕ್ಷೆಗಳ ಅಂತಿಮವಾದ ಅಧಿಕೃತ ವೇಳಾಪಟ್ಟಿಯನ್ನು KSEAB ಮಂಡಳಿಯ ಜಾಲತಾಣ https://kseab.karnataka.gov.in/english ದಲ್ಲಿ ಬಿಡುಗಡೆ ಮಾಡಲಾಗಿದೆ. 2026 ರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ವಿಸ್ತೃತವಾದ ಪರೀಕ್ಷಾ ವೇಳಾಪಟ್ಟಿಯನ್ನು ಪರಿಶೀಲಿಸಬಹುದು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment