SSLC 2025 Exam 3: ಉತ್ತರ ಪತ್ರಿಕೆ ನಕಲು ಪ್ರತಿ, ಮರುಎಣಿಕೆ, ಮರುಮೌಲ್ಯಮಾಪನ ಅರ್ಜಿ ಸಲ್ಲಿಕೆ ಹೇಗೆ?

By Shwetha Chidambar

Published On:

IST

ಫಾಲೋ ಮಾಡಿ

SSLC 2025 Exam-3 Photocopy, Retotalling, Revaluation Application
SSLC 2025 Exam-3 Photocopy, Retotalling, Revaluation Application

ಕರ್ನಾಟಕದಲ್ಲಿ 2025ರ ಎಸ್ಸೆಸ್ಸೆಲ್ಸಿ ಪರೀಕ್ಷೆ-3ರ ಫಲಿತಾಂಶವನ್ನು ಜು.23ರಂದು ಪ್ರಕಟಿಸಲಾಗಿದ್ದು, ಪ್ರಸ್ತುತ ವಿದ್ಯಾರ್ಥಿಗಳಲ್ಲಿ ಫಲಿತಾಂಶದ ಕುರಿತು ಗೊಂದಲಗಳಿದ್ದಲ್ಲಿ, ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಪ್ರಕಟಿತ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ನೇರವಾಗಿ ಮರುಎಣಿಕೆಗಾಗಿ ಭೌತಿಕವಾಗಿ ಅರ್ಜಿ ಸಲ್ಲಿಸುವಂತಿಲ್ಲ, ಅದರ ಬದಲಾಗಿ ಆನ್ಲೈನ್ ಮೂಲಕ ನಿಗದಿತ ಶುಲ್ಕ ಪಾವತಿಸಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆದು ನಂತರವೇ
ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

Karnataka One ಮೊಬೈಲ್ ಆ್ಯಪ್‌

ಫಲಿತಾಂಶ ಪ್ರಕಟಗೊಂಡ ನಂತರ ಅಭ್ಯರ್ಥಿಗಳಿಗೆ ಫಲಿತಾಂಶದ ಕುರಿತು ಯಾವುದೇ ಗೊಂದಲಗಳಿದ್ದಲ್ಲಿ, ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿಯನ್ನು ರಾಜ್ಯ ಸರ್ಕಾರದ Karnataka One ಮೊಬೈಲ್ ಆಪ್ ಅನ್ನು ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಂಡು ಆಪ್ ಮೂಲಕ ಆನ್ ಲೈನ್ ನಲ್ಲಿ ನಿಗದಿತ ಶುಲ್ಕ ಪಾವತಿಸಿ,
2025ರ ಜುಲೈ ಮಾಹೆಯ ಎಸ್.ಎಸ್.ಎಲ್.ಸಿ ಪರೀಕ್ಷೆ-3ರ ಮೌಲ್ಯಮಾಪನಗೊಂಡ ಉತ್ತರ ಪತ್ರಿಕೆಗಳ ಸ್ಕ್ಯಾನ್‌ ಪ್ರತಿ, ಮರುಎಣಿಕೆ ಹಾಗೂ ಮರುಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಬಹುದು.

ಸ್ಕ್ಯಾನ್ ಪ್ರತಿ ಮತ್ತು ಮರುಮೌಲ್ಯಮಾಪನ ಶುಲ್ಕದ ವಿವರ

Online ಮೂಲಕ ಕೆ1 ನಲ್ಲಿ ಅಥವಾ Offline ಚಲನ್ ಮೂಲಕ ಯೂನಿಯನ್ ಬ್ಯಾಂಕ್ ಆಪ್ ಇಂಡಿಯಾನಲ್ಲಿ ಪಾವತಿಸಿದಲ್ಲಿ – ಸ್ಕ್ಯಾನ್ ಪ್ರತಿ ಒಂದು ವಿಷಯಕ್ಕೆ – 410 ರೂ. (ಮರುಮೌಲ್ಯಮಾಪನ ಒಂದು ವಿಷಯಕ್ಕೆ – 810 ರೂ.)

Offline ಚಲನ್ ಮೂಲಕ ಬಿ1 ಮತ್ತು ಕೆ1 ನಲ್ಲಿ ಪಾವತಿಸಿದಲ್ಲಿ ಸ್ಕ್ಯಾನ್ ಪ್ರತಿ ಒಂದು ವಿಷಯಕ್ಕೆ – 420 ರೂ. (ಮರುಮೌಲ್ಯಮಾಪನ ಒಂದು ವಿಷಯಕ್ಕೆ – 820 ರೂ.)

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಲು ಜು.24 ರಿಂದ 28ರ ವರೆಗೆ ಕಾಲಾವಕಾಶವನ್ನು ನೀಡಲಾಗಿದೆ.
  • ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ ನಂತರ Offline ಚಲನ್ ಡೌನ್‌ ಲೋಡ್ ಮಾಡಿಕೊಂಡು ಶುಲ್ಕವನ್ನು ಬಿ)/ಕೆ1/ಬ್ಯಾಂಕಿಗೆ ಪಾವತಿಸಲು ಜು.29 ಕೊನೆಯ ದಿನಾಂಕವಾಗಿದೆ.
  • ಉತ್ತರ ಪತ್ರಿಕೆಗಳ ಮರು ಎಣಿಕೆಗೆ ಮತ್ತು ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಜು.27 ರಿಂದ 31ರ ವರೆಗೆ ದಿನಾಂಕ ನಿಗದಿಪಡಿಸಲಾಗಿದೆ.
  • ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ಆನ್‌ಲೈನ್ ಬ್ಯಾಂಕಿಂಗ್ ಸೌಲಭ್ಯವಿಲ್ಲದವರು ಆನ್‌ಲೈನ್‌ನಲ್ಲಿ ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ನಂತರ Offline ಚಲನ್ ಡೌನ್‌ಲೋಡ್ ಮಾಡಿಕೊಂಡು ಶುಲ್ಕವನ್ನು ಬಿ1/ಕೆ1/ಬ್ಯಾಂಕಿಗೆ ಪಾವತಿಸಲು ಆ.01 ಕೊನೆಯ ದಿನಾಂಕವಾಗಿದೆ.

ಮರುಎಣಿಕೆಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು

ಮರುಎಣಿಕೆ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಂಬಂಧಪಟ್ಟ ವಿಷಯದ ಉತ್ತರ ಪತ್ರಿಕೆಯ ಸ್ಕ್ಯಾನ್‌ ಪ್ರತಿಯನ್ನು ಪಡೆದ ನಂತರ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಖಚಿತಪಡಿಸಿಕೊಂಡ ನಂತರವೇ ಮರುಎಣಿಕೆಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.

ಮರುಎಣಿಕೆಯು ಉಚಿತವಾಗಿದ್ದು, ಪ್ರತ್ಯೇಕ ಶುಲ್ಕವಿರುವುದಿಲ್ಲ. ಮರುಎಣಿಕೆ ಅಂಕಗಳ ಎಣಿಕೆಯಲ್ಲಿ ವ್ಯತ್ಯಾಸವಿದ್ದಲ್ಲಿ ಪರಿಶೀಲಿಸಿ ಪರಿಷ್ಕೃತ ಫಲಿತಾಂಶ ಪಟ್ಟಿಯನ್ನು ಸಂಬಂಧಿಸಿದ ಶಾಲೆಗೆ ಹಾಗೂ ಎಸ್‌ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ರವಾನಿಸಲಾಗುವುದು.

Important Direct Links:

SSLC 2025 Exam-3 Photocopy, Retotalling, Revaluation Apply Link Click Here
Official Websitekseeb.karnataka.gov.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

1 thought on “SSLC 2025 Exam 3: ಉತ್ತರ ಪತ್ರಿಕೆ ನಕಲು ಪ್ರತಿ, ಮರುಎಣಿಕೆ, ಮರುಮೌಲ್ಯಮಾಪನ ಅರ್ಜಿ ಸಲ್ಲಿಕೆ ಹೇಗೆ?”

Leave a Comment