Supreme Court of India Court Master Recruitment 2025
ಕೋರ್ಟ್ ಮಾಸ್ಟರ್(ಶಾರ್ಟ್ಹ್ಯಾಂಡ್) ಹುದ್ದೆಗಳ ನೇಮಕಾತಿಗಾಗಿ ಸುಪ್ರೀಂ ಕೋರ್ಟ್ ಆಫ್ ಇಂಡಿಯಾ (SCI) ಅಧಿಸೂಚನೆಯನ್ನು ಹೊರಡಿಸಿದೆ.
ಭಾರತದ ಸುಪ್ರೀಂ ಕೋರ್ಟ್ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 30 ಕೋರ್ಟ್ ಮಾಸ್ಟರ್ (ಶಾರ್ಟ್ ಹ್ಯಾಂಡ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು SCI ಅಧಿಕೃತ ವೆಬ್ಸೈಟ್ https://www.sci.gov.in/recruitments/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಅಧಿಸೂಚನೆಯ ದಿನಾಂಕ – ಜುಲೈ 28, 2025
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 30, 2025
ಅರ್ಜಿ ಸಲ್ಲಿಕೆ ಕೊನೆ ದಿನಾಂಕ – ಸೆಪ್ಟೆಂಬರ್ 15, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು ಜೊತೆಗೆ ಇಂಗ್ಲಿಷ್ ಶಾರ್ಟ್ ಹ್ಯಾಂಡ್ ವೇಗ – ನಿಮಿಷಕ್ಕೆ 120 ಪದಗಳು ಮತ್ತು ಟೈಪಿಂಗ್ – ನಿಮಿಷಕ್ಕೆ 40 ಪದಗಳು, ಕಂಪ್ಯೂಟರ್ ಜ್ಞಾನ ಹಾಗೂ 5 ವರ್ಷಗಳ ಅನುಭವ ಹೊಂದಿರಬೇಕು.
ವಯೋಮಿತಿ:
01-07-2025 ರಂತೆ;
ಕನಿಷ್ಠ ಮಿತಿ 30 ವರ್ಷಗಳು
ಗರಿಷ್ಠ ಮಿತಿ 45 ವರ್ಷಗಳು
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಆಯ್ಕೆ ವಿಧಾನ:
ಸಂಕ್ಷಿಪ್ತ (ಇಂಗ್ಲಿಷ್) ಪರೀಕ್ಷೆ
ಲಿಖಿತ ಪರೀಕ್ಷೆ(ವಸ್ತುನಿಷ್ಠ ಪ್ರಕಾರ)
ಕಂಪ್ಯೂಟರ್‌ನಲ್ಲಿ ಟೈಪಿಂಗ್ ವೇಗ ಪರೀಕ್ಷೆ
ವೈಯಕ್ತಿಕ ಸಂದರ್ಶನ
ದಾಖಲೆ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂಬಳ:
ತಿಂಗಳಿಗೆ ರೂ.67,700/- (ಪೇ ಲೆವೆಲ್ 11) ಜೊತೆಗೆ ಭತ್ಯೆ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – 1500ರೂ.
ಪ.ಜಾತಿ, ಪ.ಪಂಗಡ, ಮಾಜಿ ಸೈನಿಕ, ಅಂಗವಿಕಲ, ಸ್ವಾತಂತ್ರ್ಯ ಹೋರಾಟಗಾರರ ಅವಲಂಬಿತ ಅಭ್ಯರ್ಥಿಗಳು ಹಾಗೂ ಒಬಿಸಿ ಅಭ್ಯರ್ಥಿಗಳಿಗೆ – 750ರೂ.
How to Apply for Supreme Court of India Court Master Recruitment 2025
ಅರ್ಜಿ ಸಲ್ಲಿಸುವ ವಿಧಾನ;
SCI ಅಧಿಕೃತ ವೆಬ್ಸೈಟ್ https://www.sci.gov.in/recruitments/ ಗೆ ಭೇಟಿ ನೀಡಿ.
ನೋಂದಾಯಿತ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
ಕೋರ್ಟ್ ಮಾಸ್ಟರ್ (ಶಾರ್ಟ್ ಹ್ಯಾಂಡ್) ಹುದ್ದೆ ನೇಮಕಾತಿ 2025 ಅರ್ಜಿ ನಮೂನೆ ಆಯ್ಕೆ ಮಾಡಿ.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ. ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
2a
Pundalik l sonna
Ms kollesha S S L C II PuC Completing ms kollesha