ಭಾರತದ ಸರ್ವೋಚ್ಚ ನ್ಯಾಯಾಲಯ(SCI) ಅಲ್ಪಾವಧಿಯ ಒಪ್ಪಂದದ ನಿಯೋಜನೆ ಆಧಾರದಲ್ಲಿ ಕಾನೂನು ಗುಮಾಸ್ತ-ಕಮ್-ಸಂಶೋಧನಾ ಸಹವರ್ತಿ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 90 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನೇಮಕ ನಡೆಯಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಫೆ.07ರೊಳಗೆ ನ್ಯಾಯಾಲಯದ ಅಧಿಕೃತ ವೆಬ್ಸೈಟ್ https://www.sci.gov.in/recruitments/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ನೇಮಕ ಪ್ರಕ್ರಿಯೆಯು ಮೂರು ಭಾಗಗಳನ್ನು ಒಳಗೊಂಡಿದೆ. ಆನ್ಲೈನ್ MCQ ಆಧಾರಿತ ಪರೀಕ್ಷೆ, ಲಿಖಿತ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಕಂಪ್ಯೂಟರ್ನಲ್ಲಿ ಪರದೆ ಮಾಡಲಾಗುವುದು ಅಭ್ಯರ್ಥಿಗಳು ಉತ್ತರಗಳನ್ನು ನೀಡಲಾದ ಉತ್ತರ ಪತ್ರಿಕೆ ಮೇಲೆ ಬರೆಯಬೇಕು ಕೊನೆಗೆ ಸಂದರ್ಶನ ನಡೆಸಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ಜನವರಿ 20, 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಫೆಬ್ರವರಿ 07, 2026
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಫೆಬ್ರವರಿ 07, 2026
ಲಿಖಿತ ಪರೀಕ್ಷೆಯ ದಿನಾಂಕ – ಮಾರ್ಚ್ 07, 2026
ಶೈಕ್ಷಣಿಕ ಅರ್ಹತೆ:
ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಕಾನೂನಿನಲ್ಲಿ ಪದವಿ ಪೂರ್ಣಗೊಳಿಸಿರಬೇಕು ಮತ್ತು ವಕೀಲರಾಗಿ ದಾಖಲಾತಿಯಾಗಿ ಭಾರತೀಯ ಬಾರ್ ಕೌನ್ಸಿಲ್ನಿಂದ ಮಾನ್ಯತೆ ಪಡೆದಿರಬೇಕು.
• ಯಾವುದೇ ವಿಭಾಗದಲ್ಲಿ ಪದವಿ ಪಡೆದ ನಂತರ 05 ವರ್ಷಗಳ ಇಂಟಿಗ್ರೇಟೆಡ್ ಲಾ ಕೋರ್ಸ್ನ 5ನೇ ವರ್ಷದಲ್ಲಿ ಅಥವಾ 03 ವರ್ಷಗಳ ಕಾನೂನು ಕೋರ್ಸ್ನ 3ನೇ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕಾನೂನು ಕ್ಲರ್ಕ್-ಕಮ್-ರಿಸರ್ಚ್ ಅಸೋಸಿಯೇಟ್ ಆಗಿ ನಿಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಕಾನೂನು ಅರ್ಹತೆಯನ್ನು ಪಡೆದಿರುವ ಪುರಾವೆಯನ್ನು ಒದಗಿಸಿದರೆ ಮಾತ್ರ ಅರ್ಜಿ ಸಲ್ಲಿಸಬಹುದು.
ವಯೋಮಿತಿ:
07-02-2026ರಂತೆ;
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 32 ವರ್ಷಗಳು
ವಯೋಮಿತಿ ಸಡಿಲಿಕೆ; ಭಾರತದ ಸುಪ್ರೀಂ ಕೋರ್ಟ್ನ ನಿಯಮಗಳ ಅನುಸಾರ.
ಆಯ್ಕೆ ವಿಧಾನ:
MCQ ಆಧಾರಿತ ಪರೀಕ್ಷೆ – I
ಲಿಖಿತ ಪರೀಕ್ಷೆ – II
ಸಂದರ್ಶನ
ದಾಖಲಾತಿ ಪರಿಶೀಲನೆ
ಸಂಬಳ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ₹1,00,000ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೂ – 750ರೂ.
ಅರ್ಜಿ ಸಲ್ಲಿಸುವ ವಿಧಾನ
• ಅಭ್ಯರ್ಥಿಗಳು SCI ಅಧಿಕೃತ ವೆಬ್ಸೈಟ್ https://cdn3.digialm.com/EForms/configuredHtml/32912/97660/Index.htmlಗೆ ಭೇಟಿ ನೀಡಿ.
Supreme Court Of India Law Clerk Application Form 2026
• ನೋಂದಾಯಿತ ಮೊಬೈಲ್ ಸಂಖ್ಯೆ ಹಾಗೂ ಓಟಿಪಿ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ.
• ಬಳಿಕ ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ನಮೂದಿಸಿ, ಭಾವಚಿತ್ರ, ಸಹಿ ಹಾಗೂ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ನಂತರ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.