ಭಾರತದ ಸುಪ್ರೀಂ ಕೋರ್ಟ್(SCI) ಜೂನಿಯರ್ ಕೋರ್ಟ್ ಅಟೆಂಡೆಂಟ್‌ಗಳ (Cooking Knowing) ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಭಾರತೀಯ ಸುಪ್ರೀಂ ಕೋಟ್೯ ನಲ್ಲಿ ಖಾಲಿ ಇರುವ ಜೂನಿಯರ್ ಕೋರ್ಟ್ ಅಟೆಂಡೆಂಟ್ (Cooking Knowing) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಅಡುಗೆಯಲ್ಲಿ ಪ್ರಾಯೋಗಿಕ ಪರೀಕ್ಷೆಯನ್ನು ನೀಡಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು SCI ಜೂನಿಯರ್ ಕೋರ್ಟ್ ಅಟೆಂಡೆಂಟ್ ನೇಮಕಾತಿ 2024 ಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟ್ sci.gov.in. ಸೆಪ್ಟೆಂಬರ್ 12ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ Supreme Court of India Recruitment 2024 ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲಾಗಿದ್ದು ಗಮನವಿಟ್ಟು ಓದಿರಿ.
ನೇಮಕಾತಿಯ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಅಗಸ್ಟ್ 23, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 12 2024
ಖಾಲಿ ಇರುವ ಹುದ್ದೆಗಳ ವಿವರ:
ಜೂನಿಯರ್ ಕೋರ್ಟ್ ಅಟೆಂಡೆಂಟ್‌ಗಳ (Cooking Knowing) – 80 ಹುದ್ದೆಗಳು
ಶೈಕ್ಷಣಿಕ ಅರ್ಹತೆಗಳು:
10 ನೇ ತೇರ್ಗಡೆ + 1 ವರ್ಷದ ಅಡುಗೆ/ ಪಾಕಶಾಲೆಯಲ್ಲಿ ಡಿಪ್ಲೊಮಾ + 3 ವರ್ಷಗಳ ಕಾರ್ಯಾ ನಿರ್ವಹಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18ರಿಂದ ಗರಿಷ್ಠ 27 ವರ್ಷದ ಒಳಗಿರಬೇಕು.
ವೇತನ ವಿವರ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹46, 210/- ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
• ಲಿಖಿತ ಪರೀಕ್ಷೆ • ಅಡುಗೆಯಲ್ಲಿ ಪ್ರಾಯೋಗಿಕ ಪರೀಕ್ಷೆ • ಸಂದರ್ಶನ • ಡಾಕ್ಯುಮೆಂಟ್ ಪರಿಶೀಲನೆ • ವೈದ್ಯಕೀಯ ಪರೀಕ್ಷೆ
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ – ₹400 SC/ST/ ಮತ್ತು ಮಹಿಳಾ ಅಭ್ಯರ್ಥಿಗಳಿಗೆ – ₹20