Supreme Court of India Programmer Recruitment 2025
Supreme Court Vacancy 2025: ಭಾರತದ ಸರ್ವೋಚ್ಚ ನ್ಯಾಯಾಲಯದಲ್ಲಿ ಸೀನಿಯರ್ ಕೋರ್ಟ್ ಅಸಿಸ್ಟೆಂಟ್ ಕಮ್ ಸೀನಿಯರ್ ಪ್ರೋಗ್ರಾಮರ್ ಮತ್ತು ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಕಮ್ ಜೂನಿಯರ್ ಪ್ರೋಗ್ರಾಮರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 6 ಸೀನಿಯರ್ ಕೋರ್ಟ್ ಅಸಿಸ್ಟೆಂಟ್ ಕಮ್ ಸೀನಿಯರ್ ಪ್ರೋಗ್ರಾಮರ್ ಮತ್ತು 20 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಕಮ್ ಜೂನಿಯರ್ ಪ್ರೋಗ್ರಾಮರ್ ಒಟ್ಟು 26 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SCI ಅಧಿಕೃತ ವೆಬ್ ಸೈಟ್ www.sci.gov.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
Organization Name – Supreme Court of India Post Name – Senior Court Assistant-cum-Senior Programmer Total Vacancy – 26 Application Mode – Online Job Location – India
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ -06-06-2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -27-06-2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಬಿ.ಎಸ್ಸಿ(B.Sc), ಬಿ.ಟೆಕ್(B.Tech)/ಬಿಇ(BE), ಎಲ್‌ಎಲ್‌ಬಿ(LLB), ಎಂ.ಎಸ್ಸಿ(M.Sc), ಎಂಸಿಎ(MCA) ಪೂರ್ಣಗೊಳಿಸಿರಬೇಕು.
ವಯೋಮಿತಿ:
ಜೂನಿಯರ್ ಕೋರ್ಟ್ ಅಸಿಸ್ಟೆಂಟ್-ಕಮ್-ಜೂನಿಯರ್ ಪ್ರೋಗ್ರಾಮರ್ ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಹಿರಿಯ ನ್ಯಾಯಾಲಯ ಸಹಾಯಕ-ಕಮ್-ಹಿರಿಯ ಪ್ರೋಗ್ರಾಮರ್ ಹುದ್ದೆಗೆ;
ಕನಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು
ವೇತನ:
ಹಿರಿಯ ನ್ಯಾಯಾಲಯ ಸಹಾಯಕ-ಕಮ್-ಹಿರಿಯ ಪ್ರೋಗ್ರಾಮರ್ ಹುದ್ದೆಗೆ – 47,600 ರೂ.
ಜೂನಿಯರ್ ಕೋರ್ಟ್ ಅಸಿಸ್ಟೆಂಟ್-ಕಮ್-ಜೂನಿಯರ್ ಪ್ರೋಗ್ರಾಮರ್ ಹುದ್ದೆಗೆ – 35,400 ರೂ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ತಾಂತ್ರಿಕ ಸಾಮರ್ಥ್ಯ ಪರೀಕ್ಷೆ
ಶಾರ್ಟ್ ಲಿಸ್ಟ್
ಸಂದರ್ಶನ
ಅರ್ಜಿ ಶುಲ್ಕ:
ಸಾಮಾನ್ಯ, ಓಬಿಸಿ ಅಭ್ಯರ್ಥಿಗಳಿಗೆ – 1000 ರೂ.
ಎಸ್.ಸಿ, ಎಸ್.ಟಿ, ಮಾಜಿ ಸೈನಿಕರು, ವಿಕಲಚೇತನ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಅವಲಂಬಿತ ಅಭ್ಯರ್ಥಿಗಳಿಗೆ – 250 ರೂ.
How to Apply for Supreme Court of India Programmer Recruitment 2025
ಅರ್ಜಿ ಸಲ್ಲಿಸುವ ವಿಧಾನ;
ಭಾರತದ ಸರ್ವೋಚ್ಚ ನ್ಯಾಯಾಲಯ ಅಧಿಕೃತ ವೆಬ್ ಸೈಟ್ https://www.sci.gov.in/ ಗೆ ಭೇಟಿ ನೀಡಿ.
ಇ-ಮೇಲ್ ಐಡಿ ಅಥವಾ ಮೊಬೈಲ್ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ. ಅಥವಾ ನೋಂದಾಯಿಸಿ.
ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಸ್ವ ವಿವರ, ಭಾವಚಿತ್ರ, ಸಹಿ ಹಾಗೂ ಶೈಕ್ಷಣಿಕ ವಿವರಗಳನ್ನು ಅಪ್ಲೋಡ್ ಮಾಡಿ.
ಅರ್ಜಿ ಶುಲ್ಕ ಪಾವತಿ ಮಾಡಿ.
ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.