2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ CUET ಪರೀಕ್ಷಾ ಪೂರ್ವ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ನಡೆಸಲಾಗುವ ಸಿಯುಇಟಿ(Common University Entrance Test) ಪರೀಕ್ಷಾ ಪೂರ್ವ ಆನ್ಲೈನ್ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸೆ.20 ರೊಳಗೆ https://swdservices.karnataka.gov.in/petccoaching/CUETHome.aspxಗೆ ಭೇಟಿ ಅರ್ಜಿ ಸಲ್ಲಿಸಬಹುದುಎಂದು ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಧಿಕೃತ ಅಧಿಸೂಚನೆಯ ಪ್ರಕಾರ, ವಿದ್ಯಾರ್ಥಿಗಳು ಸೆಪ್ಟೆಂಬರ್ 20, 2025ರೊಳಗೆ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯುಸಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು.
ವಯೋಮಿತಿ:
20-09-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 15 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ – 18 ವರ್ಷಗಳು
ತರಬೇತಿಯ ವಿವರ:
2025-26ರಲ್ಲಿ ದ್ವಿತೀಯ ಪಿಯುಸಿ/12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನುರಿತ ತರಬೇತಿ ಸಂಸ್ಥೆಯಿಂದ (ತರಬೇತಿಯ ಅವಧಿ 250 ಗಂಟೆಗಳ ವರೆಗೆ) CUET ಪರೀಕ್ಷಾ ಪೂರ್ವ ಆನ್ಲೈನ್ ತರಬೇತಿಯನ್ನು ನೀಡಲಾಗುವುದು.
ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು
ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
ಕುಟುಂಬದ ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ 5 ಲಕ್ಷ ರೂ. ಮೀರಿರಬಾರದು.
ಆಯ್ಕೆ ವಿಧಾನ:
ಮೊದಲು ಅರ್ಜಿ ಸಲ್ಲಿಸದವರಿಗೆ ಪ್ರಥಮ ಆದ್ಯತೆ ನೀಡಿ, ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ತರಬೇತಿಯ ನಿಯಮಗಳು ಮತ್ತು ಷರತ್ತುಗಳು:
ತರಬೇತಿ ಸಂಸ್ಥೆ, ಅಧ್ಯಾಪಕ ಸದಸ್ಯರು ಅಥವಾ ಬೋಧಕರ ಕಡೆಗೆ ಅವಿಧೇಯತೆ ಅಥವಾ ದುರ್ನಡತೆ ಪ್ರದರ್ಶಿಸುವ ಯಾವುದೇ ಅಭ್ಯರ್ಥಿಯನ್ನು ತಕ್ಷಣವೇ ಅನರ್ಹಗೊಳಿಸಲಾಗುತ್ತದೆ.
How to Apply for SW IGCCD Free CUET Exam Training 2025
• ಇಂದಿರಾ ಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ಅಧಿಕೃತ ವೆಬ್ಸೈಟ್ https://swdservices.karnataka.gov.in/petccoaching/CUETHome.aspx ಗೆ ಭೇಟಿ ನೀಡಿ.
• CUET ಪರೀಕ್ಷೆಗೆ ಪೂರ್ವ-ಪರೀಕ್ಷಾ ಆನ್ಲೈನ್ ತರಬೇತಿಗಾಗಿ ಅರ್ಜಿ ವಿಭಾಗದ ಕೆಳಗೆ ನೀಡಲಾಗಿರುವ ಅನ್ವಯಿಸು ಲಿಂಕ್ ಮೇಲೆ ಕ್ಲಿಕ್ ಮಾಡಿ.
• ನಂತರ ನಿಮ್ಮ ಆಧಾರ್ ಸಂಖ್ಯೆ, ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಹಾಗೂ ಕ್ಯಾಪ್ಚ ನಮೂದಿಸಿ ಮುಂದುವರೆಯಿರಿ.
• ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ ಸಹಿ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಬಳಕೆಗಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.