ಸ್ವಾವಲಂಬಿ ಸಾರಥಿ ಯೋಜನೆ ಅರ್ಜಿ ಸಲ್ಲಿಕೆ ಪ್ರಾರಂಭ

Published on:

Updated On:

2026-27ನೇ ಸಾಲಿಗೆ ರಾಜ್ಯದ ವಿವಿಧ ಅಭಿವೃದ್ಧಿ ನಿಗಮಗಳಿಂದ ಸ್ವಾವಲಂಬಿ ಸಾರಥಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ/ಪಡೆದ ಟ್ಯಾಕ್ಸಿ ಅಥವಾ ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ.50 ರಷ್ಟು ಅಥವಾ ಗರಿಷ್ಠ ರೂ.3,00,000/- ರವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ ರೂ.75,000/- ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು.

ಸ್ವಾವಲಂಬಿ ಸಾರಥಿ ಯೋಜನೆ: ಅರ್ಜಿ ಅರ್ಹತೆಗಳೇನು?(Eligibility Criteria)

ಅರ್ಜಿದಾರರು ಈ ಕೆಳಗಿನ ಎಲ್ಲಾ ಅರ್ಹತೆಗಳಿಗೆ ಬದ್ಧರಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ;

☞ ಕರ್ನಾಟಕ ರಾಜ್ಯದ ನಿಗದಿತ ಜಾತಿಗೆ ಸೇರಿದವರಾಗಿರಬೇಕು.
☞ ಕರ್ನಾಟಕದ ಶಾಶ್ವತ ನಿವಾಸಿಯಾಗಿರಬೇಕು.
☞ ವಯಸ್ಸು 21 ರಿಂದ 45 ವರ್ಷಗಳ ನಡುವೆ ಇರಬೇಕು.
☞ ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಕುಟುಂಬದ ಆದಾಯವು ರೂ. 4,50,000/- ಕ್ಕಿಂತ ಕಡಿಮೆ ಇರಬೇಕು.
☞ ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು
☞ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.
☞ ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಇದನ್ನೂ ಓದಿ: ಗಂಗಾ ಕಲ್ಯಾಣ ಅರ್ಜಿ ಸಲ್ಲಿಕೆ ಪ್ರಾರಂಭ: Ganga Kalyana Yojana Online Application 2026-27 Apply Online

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?

ಅರ್ಜಿದಾರರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಕೆಳಗಿನ ಎಲ್ಲಾ ಪ್ರಮುಖ ದಾಖಲೆಗಳನ್ನು ಹೊಂದಿರಬೇಕು.

  • ಅರ್ಜಿದಾರರ ಫೋಟೋ (Photo)
  • ಮೊಬೈಲ್ ನಂಬರ್
  • ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ (Caste Certificate)
  • ಆದಾಯ ಪ್ರಮಾಣಪತ್ರ (Income Certificate)
  • ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
  • ವಾಹನ ಚಾಲನಾ ಪರವಾನಗಿ ಪ್ರತಿ (Driving Licence)
  • ಬ್ಯಾಂಕ್ ಪಾಸ್ ಬುಕ್ (Bank Pass Book)
  • ವಾಹನದ ಅಂದಾಜು ದರಪಟ್ಟಿ
  • ಸ್ವಯಂ ಘೋಷಣೆ ಪತ್ರ (Self Declaration Form)

ನಿಗಮವಾರು ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಕೆಯ ಕೊನೆ ದಿನಾಂಕಗಳು:

ನಿಗಮಗಳ ಹೆಸರುಕೊನೆಯ ದಿನಾಂಕ
(Last Date)
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ(KVLDCL) ಸೆಪ್ಟೆಂಬರ್‌ 30, 2026
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ
(AMBIGARADEVELOPMENT)
ಸೆಪ್ಟೆಂಬರ್‌ 30, 2026
ಒಕ್ಕಲಿಗ ಸಮುದಾಯ ಅಭಿವೃದ್ದಿ ನಿಗಮ ನಿಯಮಿತಸೆಪ್ಟೆಂಬರ್‌ 30, 2026
ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (OBC)ಸೆಪ್ಟೆಂಬರ್‌ 30, 2026
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ(KVCDCL)ಸೆಪ್ಟೆಂಬರ್‌ 30, 2026
ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮಸೆಪ್ಟೆಂಬರ್‌ 30, 2026
ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮಸೆಪ್ಟೆಂಬರ್‌ 30, 2026
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮಸೆಪ್ಟೆಂಬರ್‌ 30, 2026
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿಯಮಿತಸೆಪ್ಟೆಂಬರ್‌ 30, 2026
ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಸೆಪ್ಟೆಂಬರ್‌ 30, 2026
ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮಸೆಪ್ಟೆಂಬರ್‌ 30, 2026
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ—————
ಡಾ: ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ—————
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ—————
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ—————

ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ?

ಗಮನಿಸಿ: ಅರ್ಹ ಫಲಾಪೇಕ್ಷಿಗಳು ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಹತ್ತಿರದ ಗ್ರಾಮ-ಒನ್, ಕರ್ನಾಟಕ-ಒನ್ ಹಾಗೂ ಬೆಂಗಳೂರು-ಒನ್ ನಾಗರಿಕ ಕೇಂದ್ರಗಳಿಗೆ ಭೇಟಿ ನೀಡಿ ಈ ಕೆಳಗಿನ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಅಂತಿಮ ನುಡಿ: ಈ ಮಾಹಿತಿ ನಿಮಗೆ ಸಹಾಯಕವಾಗಿದೆ ಎಂದು ನಾವು ಭಾವಿಸಿದ್ದೇವೆ. ಇದೆ ರೀತಿ ಹೆಚ್ಚಿನ ಮಾಹಿತಿಗಾಗಿ ನಮ್ಮ ಅಧಿಕೃತ ಟೆಲಿಗ್ರಾಂ ಚಾನೆಲ್ ಅಥವಾ ವಾಟ್ಸಾಪ್ಪ್ ಗ್ರೂಪ್ ಗೆ ಜಾಯಿನ್ ಆಗಿರಿ.

ಮುಖ್ಯ ಲಿಂಕ್‌ಗಳು:

ಸೇವಾ ಸಿಂಧು ಪೋರ್ಟಲ್‌ ಲಿಂಕ್https://sevasindhuservices.karnataka.gov.in/
ಸ್ವಯಂ ದೃಢೀಕರಣ ನಮೂನೆ ಪಿಡಿಎಫ್ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಸುದ್ದಿಗಾಗಿkಕರ್ನಾಟಕಹೆಲ್ಪ್.ಇನ್

How to Apply for Swavalambi Sarathi Yojana Karnataka 2026-27?

Visit the Official Website of Seva sindhu Portal (https://sevasindhuservices.karnataka.gov.in/) to Apply Online For Vehicle Subsidy Scheme (Swavalambi Sarathi)

What is the Last Date Of Swavalambi Sarathi Online Application Form 2026?

September 30

About the Author

ನಮಸ್ತೇ, ಇದು ಭೀಮು.ದೊರೆ... ಪ್ರಸ್ತುತ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿ.ಡಿಜಿಟಲ್‌ ಸುದ್ದಿ ಮಾಧ್ಯಮದಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ತೊಡಗಿಕೊಂಡಿದ್ದೇನೆ.