ಯಾದಗಿರಿ| ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳ ನೇಮಕಾತಿ

ಯಾದಗಿರಿ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಾಲ್ಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ(61) ಮತ್ತು ಸಹಾಯಕಿ(171) ಹುದ್ದೆಗಳ ನೇಮಕಾತಿಗಾಗಿ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಎಸ್‌ಎಸ್‌ಎಲ್‌ಸಿ, ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತು ಯಾದಗಿರಿ ಜಿಲ್ಲಾಡಳಿತ ವೆಬ್‌ಸೈಟ್ https://yadgir.nic.in/ ಅಥವಾ ಜಿಲ್ಲಾ ಪಂಚಾಯತ್ ವೆಬ್‌ಸೈಟ್ https://zpyadgiri.karnataka.gov.in/ನಲ್ಲಿ ಲಭ್ಯವಿರುವ ಲಿಂಕ್‌ ಬಳಸಿಕೊಂಡು ಅರ್ಜಿ … More

ಗದಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಭರ್ತಿ

ಗದಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ ನಾನಾ ತಾಲೂಕುಗಳಲ್ಲಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಗದಗ, ಶಿರಹಟ್ಟಿ, ರೋಣ, ನರಗುಂದ ಹಾಗೂ ಮುಂಡರಗಿ ತಾಲೂಕುಗಳಲ್ಲಿ ಒಟ್ಟು 168 (37 ಅಂಗನವಾಡಿ ಕಾರ್ಯಕರ್ತೆ ಹಾಗೂ 131 ಅಂಗನವಾಡಿ ಸಹಾಯಕಿ) ಸ್ಥಾನಗಳಿಗೆ ನೇಮಕ ನಡೆಯಲಿದ್ದು, ಸದರಿ ಹುದ್ದೆಗಳ ಅರ್ಹತೆಗಳನ್ನು ಪೂರೈಸುವ ಆಸಕ್ತ ಸ್ಥಳೀಯ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಜು.30 ರೊಳಗೆ ಆಫ್‌ಲೈನ್ … More

238 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ನೇಮಕಾತಿ

ಹಾವೇರಿ: ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 238 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿ, ಹಾನಗಲ್, ಹಾವೇರಿ, ಹಿರೇಕೆರೂರು, ರಾಣೇಬೆನ್ನೂರು, ಸವಣೂರು ಹಾಗೂ ಶಿಗ್ಗಾಂವ್ ತಾಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ 61 ಅಂಗನವಾಡಿ ಕಾರ್ಯಕರ್ತೆ ಹಾಗೂ 177 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು … More

ಕೊಡಗು ಜಿಲ್ಲೆಯ ಅಂಗನವಾಡಿಗಳಲ್ಲಿ 215 ಹುದ್ದೆಗಳ ನೇರ ನೇಮಕ; ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸ್‌

ಕೊಡಗು ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ 215 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕುಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 54 ಅಂಗನವಾಡಿ ಕಾರ್ಯಕರ್ತೆ ಹಾಗೂ 161 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 215 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಸ್ಥಳೀಯ ಮಹಿಳಾ ಅಥವಾ ಲಿಂಗತ್ವ  ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು … More

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕು/ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ. ಬಂಟ್ವಾಳ, ಬೆಳ್ತಂಗಡಿ, ಮಂಗಳೂರು ಗ್ರಾಮೀಣ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ 56 ಅಂಗನವಾಡಿ ಕಾರ್ಯಕರ್ತೆ ಹಾಗೂ 221 ಅಂಗನವಾಡಿ ಸಹಾಯಕಿ ಸೇರಿ ಒಟ್ಟು 277 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ … More

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಒಟ್ಟು 257 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಜಿಲ್ಲೆಯ ವಿವಿಧ ತಾಲೂಕಿನ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಭರಮಸಾಗರ, ಚಳ್ಳಕೆರೆ, ಹಿರಿಯೂರು, ಹೊಳಲ್ಕೆರೆ, ಹೊಸದುರ್ಗ ಹಾಗೂ ಮೊಳಕಾಲ್ಕೂರು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಡಿಯಲ್ಲಿ ಖಾಲಿ ಇರುವ (29 ಅಂಗನವಾಡಿ ಕಾರ್ಯಕರ್ತೆ ಹಾಗೂ 228 ಅಂಗನವಾಡಿ ಸಹಾಯಕಿ) ಒಟ್ಟು 257 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೌರವ ಸೇವೆಯ … More