ಫಾರ್ಮಸಿಸ್ಟ್ ಅಪ್ರೆಂಟಿಸ್‌ಶಿಪ್; ಕೆಇಎ ಅರ್ಜಿ ಆಹ್ವಾನ

ಬೆಂಗಳೂರಿನ ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆ ವತಿಯಿಂದ 2026ನೇ ಸಾಲಿಗೆ ಫಾರ್ಮಸಿಸ್ಟ್ ಅಪ್ರೆಂಟಿಸ್‌ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜ.27 ಕೊನೆಯ ದಿನವಾಗಿದೆ. ಡಿಪ್ಲೊಮಾ ಇನ್ ಫಾರ್ಮಸಿ ಕೋರ್ಸ್ ಮುಗಿಸಿ ಹೊರಬರುವ ವಿದ್ಯಾರ್ಥಿಗಳು ಸ್ಥಿರ ಮತ್ತು ಸೂಕ್ತ ಉದ್ಯೋಗವನ್ನು ಪಡೆದುಕೊಳ್ಳಲು ಸಹಕಾರಿಯಾಗುವಂತೆ ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿಯಿರುವ ಹುದ್ದೆಗಳ ಎದುರಾಗಿ 950 ಡಿಪ್ಲೊಮಾ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, 11 ತಿಂಗಳ ಅವಧಿವರೆಗೆ … More

IOCLನಲ್ಲಿ 501 ಅಭ್ಯರ್ಥಿಗಳಿಗೆ ‘ಅಪ್ರೆಂಟಿಸ್‌ಶಿಪ್‌’

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನ ಮಾರ್ಕೆಟಿಂಗ್ ವಿಭಾಗದಲ್ಲಿ 1961ರ ಅಪ್ರೆಂಟಿಸ್‌ ಕಾಯ್ದೆಯಡಿ ವಿವಿಧ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಟ್ರೇಡ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಹಾಗೂ ಗ್ರಾಜುಯೇಟ್ ಅಪ್ರೆಂಟಿಸ್‌ ಸೇರಿದಂತೆ 501 ಅಭ್ಯರ್ಥಿಗಳಿಗೆ ತರಬೇತಿ ನೀಡಲಿದೆ. ಅರ್ಜಿ ಸಲ್ಲಿಕೆಗೆ ಜ.12 ಕೊನೆಯ ದಿನವಾಗಿದೆ. ಆಸಕ್ತ ಐಟಿಐ ಅಭ್ಯರ್ಥಿಗಳು https://www.apprenticeshipindia.gov.in/ಗೆ ಹಾಗೂ ಡಿಪ್ಲೊಮಾ, ಪದವೀಧರ ಅಭ್ಯರ್ಥಿಗಳು https://nats.education.gov.in/ಗೆ ಭೇಟಿ ನೀಡಿ ಅರ್ಜಿ ಸಲ್ಲಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ … More

ವಾರ್ತಾ ಇಲಾಖೆಯಲ್ಲಿ ‘ಅಪ್ರೆಂಟಿಸ್‌ಶಿಪ್‌’

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಅಪ್ರೆಂಟಿಸ್‌ಶಿಪ್‌ ತರಬೇತಿ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ ಮತ್ತು ಹುಬ್ಬಳ್ಳಿಯ ರಾಜ್ಯ ಸಮಾಚಾರ ಕೇಂದ್ರದಲ್ಲಿ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದ ಬಗ್ಗೆ ಒಂದು ವರ್ಷ ಅವಧಿಯವರೆಗೆ ತರಬೇತಿ ನೀಡಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಟ್ಟು 68 ಪದವೀಧರ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. … More

DRDOನಲ್ಲಿ ಅಪ್ರೆಂಟಿಸ್‌ಶಿಪ್‌: ವಾಕ್-ಇನ್-ಇಂಟರ್ವ್ಯೂಗೆ ಕರೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಡಿ ಬರುವ ಪ್ರಮುಖ ಸಂಶೋಧನಾ ಪ್ರಯೋಗಾಲಯವಾಗಿರುವ ರಕ್ಷಣಾ ಎಲೆಕ್ಟ್ರಾನಿಕ್ಸ್ ಸಂಶೋಧನಾ ಪ್ರಯೋಗಾಲಯ (DLRL)ನಲ್ಲಿ ಅಪ್ರೆಂಟಿಸ್‌ಶಿಪ್‌ ಕಾಯ್ದೆಯಡಿ ಅಪ್ರೆಂಟಿಸ್‌ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಪದವೀಧರ (ತಾಂತ್ರಿಕ ಮತ್ತು ತಾಂತ್ರಿಕೇತರ), ತಂತ್ರಜ್ಞ ಅಪ್ರೆಂಟಿಸ್‌ ಒಟ್ಟು 46 ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳನ್ನು ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸದರಿ ಅಪ್ರೆಂಟಿಸ್ ತರಬೇತಿಗಳಿಗೆ ಸೇರ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://nats.education.gov.inನ ಮೂಲಕ ನೋಂದಾಯಿಸಿಕೊಂಡು, ನಿಗದಿತ ವಿಳಾಸದಲ್ಲಿ ನಡೆಯುವ ವಾಕ್-ಇನ್-ಸಂದರ್ಶನಕ್ಕೆ ಹಾಜರಾಗಲು … More