ಹೋಮಿಯೋಪತಿ, ಆಯುರ್ವೇದ ತಜ್ಞ ವೈದ್ಯರ ನೇಮಕಾತಿ
ಕೋಲಾರ: ಜಿಲ್ಲಾ ಆಯುಷ್ ಇಲಾಖೆ ವ್ಯಾಪ್ತಿಯಡಿ ಬರುವ ಆಯುಷ್ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿ ಖಾಲಿ ಇರುವ ಹೋಮಿಯೋಪತಿ ತಜ್ಞ ವೈದ್ಯ ಮತ್ತು ಆಯುರ್ವೇದ ತಜ್ಞ ವೈದ್ಯರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಸರ್ಕಾರಿ ಹೋಮಿಯೋಪತಿ ಆಸ್ಪತ್ರೆ ಹಾಗೂ ಶ್ರೀನಿವಾಸಪುರ ಸರ್ಕಾರಿ ಆಯುರ್ವೇದ ಆಸ್ಪತ್ರೆಗೆ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಸಂಬಂಧಿತ ವಿಷಯದಲ್ಲಿ ಎಂಎಸ್/ಎಂಡಿ ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು … More