ಪಿಎಚ್.ಡಿ ಅಭ್ಯರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಹಾಗೂ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-I, II(ಎ), III(ಎ) ಹಾಗೂ III(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮಾಹೆಯಾನ 10,000ರೂ. ವರೆಗೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ನೀಡಲಾಗುತ್ತದೆ. ಸದರಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು … More

ವಿದ್ಯಾಸಿರಿ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಪಡೆಯಲು ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ … More

ಸ್ನಾತಕೋತ್ತರ, ವೃತ್ತಿಪರ ಪದವಿ ಕೋರ್ಸ್‌; ವಿದ್ಯಾರ್ಥಿನಿಲಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್‌ ನಂತರದ ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ ಕೋರ್ಸ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-2, 2ಎ, 2ಬಿ, 3ಎ, 3ಬಿ ವರ್ಗದವರಿಗೆ 1 ಲಕ್ಷ ಹಾಗೂ ಪ್ರವರ್ಗ -1, ಪ.ಜಾ ಮತ್ತು ಪ.ಪಂಗಡ ವರ್ಗದವರಿಗೆ 2 ಲಕ್ಷ ಹೊಂದಿರಬೇಕು. ರಾಜ್ಯ ವಿದ್ಯಾರ್ಥಿನಿಲಯ ಪೋರ್ಟಲ್‌ … More

ಉಚಿತ ಸೇನಾ ತರಬೇತಿಗೆ ಅರ್ಜಿ ಆಹ್ವಾನ; ಕಲಬುರಗಿಯಲ್ಲಿ ತರಬೇತಿ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿಗೆ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳಿಗೆ ಉಚಿತವಾಗಿ ಆಯ್ಕೆಯ ಪೂರ್ವ ಸಿದ್ಧತೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಸೇನೆ ಅಥವಾ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರಲು ತಯಾರಿ ನಡೆಸುತ್ತಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), ಹಾಗೂ 3(ಬಿ) ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ 3ನೇ ಬ್ಯಾಚ್ ಪ್ರಾರಂಭಿಸಲು … More

ಮೆಟ್ರಿಕ್​-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

BCWD Post Matric Scholarship 2025: ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳಿಗಾಗಿ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ(Fee Reimbursement), ಮತ್ತು ವಿದ್ಯಾಸಿರಿ(Vidyasiri) – [ಊಟ ಮತ್ತು ವಸತಿ ಸಹಾಯ ಯೋಜನೆ]ಯ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಯಲು SSP ಪೋರ್ಟಲ್​ … More

BCM Hostel Application 2025-26: ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಮೆಟ್ರಿಕ್ ಪೂರ್ವ(Pre Matric) ವಿದ್ಯಾರ್ಥಿ ವಸತಿ ನಿಲಯಗಳ ಪ್ರವೇಶ(BCM Hostel Pre Matric Online Application 2025-26)ಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ … More