ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ; ಸಂದರ್ಶನಕ್ಕೆ ಕರೆ
ಹೊಸಕೋಟೆ: ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರಿಗೆ ಜ.19 ರಿಂದ 13 ದಿನಗಳ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು, ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 50 ವರ್ಷ ವಯೋಮಾನದವರು ಭಾಗವಹಿಸಬಹುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. … More